ಬೆಂಗಳೂರು : ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸೋಮವಾರ ಎಐಸಿಸಿ ಎಚ್ಚರಿಕೆ ನೀಡಿದೆ.
ಮುಂದಿನ ಮುಖ್ಯಮಂತ್ರಿ ಹೇಳಿಕೆಗೆ ಸಂಬಂಧಿಸಿ ಜಮೀರ್ ಅಹಮದ್ ಗೆ ರಾಜ್ಯ ಉಸ್ತುವಾರಿ ಸುರ್ಜೆವಾಲ ಎಚ್ಚರಿಕೆ ಪತ್ರ ನೀಡಿದ್ದು,
”ಕೆಲವು ದಿನಗಳಿಂದ ನೀವು ಪಕ್ಷ ಹಾಕಿದ ಲಕ್ಷ್ಮಣ ರೇಖೆಯನ್ನು ದಾಟುತ್ತಿದ್ದೀರಿ. ಅನಗತ್ಯವಾದ ರಾಜಕೀಯ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುತ್ತಿದ್ದೀರಿಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ, ಹೀಗಾಗಿ ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟಬೇಡಿ ಎಂದು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.
ಮುಂದಿನ ದಿನಗಳಲ್ಲಿ ಹೇಳಿಕೆ ನೀಡುವಾಗ ಜಾಗೃತೆ ವಹಿಸಬೇಕು ಮತ್ತು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಅಂಟಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ ಎಂಬ ಡಿ.ಕೆ.ಶಿವಕುಮಾರ್ ಎಚ್ಚರಿಕೆಗೆ ಜಮೀರ್ ಸೆಡ್ಡು ಹೊಡೆದು ‘ ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಚಾಲನೆ ಕೊಟ್ಟಿದ್ದೇ ಡಿ.ಕೆ.ಶಿವಕುಮಾರ್. ಇದಾದ ಬಳಿಕ ನಾವು ನಮ್ಮ ಅಭಿಪ್ರಾಯ ಹೇಳಿದ್ದೇವೆ” ಎಂದು ತಿರುಗೇಟು ನೀಡಿದ್ದರು


ನಿಮ್ಮ ಕಾಮೆಂಟ್ ಬರೆಯಿರಿ