ಬೆಂಗಳೂರಿನ ತಿಲಕ ​ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಅಸ್ಸಾಂನ ಅಖ್ತರ್ ಹುಸೇನ್ ಲಷ್ಕರ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಿದ್ದ. ಶಂಕಿತ ಉಗ್ರನ ಬಗ್ಗೆ ಕೇಂದ್ರ ಗುಪ್ತದಳದಿಂದ‌ ದೊರೆತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ‌ ಪೊಲೀಸರು, ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ ಮಾಡಿದರು.

ದಾಳಿಯಲ್ಲಿ 30ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದ ಆರೋಪ ಹೊತ್ತಿರುವ ಅಖ್ತರ್, ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಈತನನ್ನು‌ ವಿಚಾರಣೆ ನಡೆಸಿದ ಬಳಿಕವೇ ಮತ್ತಷ್ಟು ಮಾಹಿತಿ ಸಿಗಲಿದೆ’ ಎಂದು‌ ಸಿಸಿಬಿ‌ ಮೂಲಗಳು ಹೇಳಿವೆ.
ಕೆಲ‌ ದಿನಗಳ ಹಿಂದೆಯಷ್ಟೇ ಓಕಳಿಪುರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement