ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರದ ವೇಳೆ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಸ್ಥಾನಕ್ಕೆ ಅನುಗುಣವಾಗಿಲ್ಲದ ಆಸನದಲ್ಲಿ ಕೂರಿಸಲಾಗಿದೆ : ವಿರೋಧ ಪಕ್ಷಗಳು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರು ಹೊಂದಿರುವ ಸ್ಥಾನಕ್ಕೆ ಅನುಗುಣವಾಗಿಲ್ಲದ ಆಸನದಲ್ಲಿ ಕೂರಿಸಲಾಗಿದೆ ಎಂದು ವಿರೋಧ ಪಕ್ಷಗಳು ಸೋಮವಾರ ಆರೋಪಿಸಿವೆ.
ಈ ಸಂಬಂಧ ಪ್ರತಿಪಕ್ಷಗಳು ರಾಜ್ಯಸಭಾ ಅಧ್ಯಕ್ಷರಿಗೆ ಪಕ್ಷಗಳು ಪತ್ರವನ್ನು ಸಲ್ಲಿಸಿವೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. “ಎಲ್ಲ ವಿರೋಧ ಪಕ್ಷಗಳು (ಟಿಎಂಸಿ ಸೇರಿದಂತೆ) ಇದೀಗ ಗೌರವಾನ್ವಿತ ಅಧ್ಯಕ್ಷರು, ರಾಜ್ಯಸಭೆಗೆ ಸಲ್ಲಿಸಿದ ಪತ್ರ” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.
ಇಂದು ಗೌರವಾನ್ವಿತ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸ್ಥಾನಕ್ಕೆ ಹೊಂದಿಕೆಯಾಗದ ಆಸನದಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿದೆ ಎಂದು ಪತ್ರದಲ್ಲಿ ಆಕ್ಷೇಪಿಸಲಾಗಿದೆ.

ಅತ್ಯಂತ ಹಿರಿಯ ನಾಯಕನಿಗೆ ತೋರಿದ ಈ ಉದ್ದೇಶಪೂರ್ವಕ ಅಗೌರವದ ಬಗ್ಗೆ ನಮ್ಮ ಆಘಾತ ಮತ್ತು ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಾವು ಪತ್ರ ಬರೆಯುತ್ತಿದ್ದೇವೆ ಮತ್ತು ಅವರಿಗೆ ನೀಡಬೇಕಾದ ಪ್ರೋಟೋಕಾಲ್ ಸೌಜನ್ಯಗಳಿಗೆ ಅನುಗುಣವಾಗಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.
ಇಂದು, ಸೋಮವಾರ ಸಂಸತ್ತಿನ ಕಿಕ್ಕಿರಿದ ಮತ್ತು ಐತಿಹಾಸಿಕ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅವರು ದೇಶದ ಎರಡನೇ ಮಹಿಳಾ ಅಧ್ಯಕ್ಷರಾಗಿದ್ದಾರೆ, ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಸಮುದಾಯದವರಾಗಿದ್ದಾರೆ ಮತ್ತು ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿಯಾಗಿದ್ದಾರೆ.
ಹಣದುಬ್ಬರ, ಜಿಎಸ್‌ಟಿ ಮೇಲಿನ ಚರ್ಚೆ :ಸಂಸತ್ತಿನಲ್ಲಿ ವಿರೋಧ
ದಿನಬಳಕೆ ವಸ್ತುಗಳ ಮೇಲಿನ ಹಣದುಬ್ಬರ ಮತ್ತು ಜಿಎಸ್‌ಟಿ ಕುರಿತು ಚರ್ಚೆ ನಡೆಯಲು ಸರ್ಕಾರ ಬಿಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿದ್ದರೆ, ಕೇಂದ್ರವು ಚರ್ಚೆಗೆ ಸಿದ್ಧ ಎಂದು ಹೇಳಿದೆ ಮತ್ತು ಪ್ರತಿಪಕ್ಷಗಳು ಚರ್ಚೆಯಿಂದ ಪಲಾಯನ ಮಾಡುತ್ತಿವೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement