ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರ್ಕಾರದ ಆದೇಶ

posted in: ರಾಜ್ಯ | 0

ಬೆಂಗಳೂರು: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು ಸರ್ಕಾರ 5.5 ವರ್ಷಗಳ ಬದಲಾಗಿ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿದೆ.
ಈ ಕುರಿತು ನಡಾವಳಿ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದಂತ ಆದೇಶವನ್ನು ಹಿಂಪಡೆಯಲಾಗಿದೆ. ಆರ್ ಟಿ ಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ 1ನೇ ದಿನಾಂಕಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ ಎಂದು ಅದರಲ್ಲಿ ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಅಲ್ಲದೆ, ಈ ಮೊದಲು ಎಲ್ ಕೆಜಿ, ಯುಕೆಜಿ ಬಳಿಕ ಒಂದನೇ ತರಗತಿಗಾಗಿ ಶಾಲೆಗೆ ದಾಖಲಾಗುವುದಕ್ಕೆ ಶೈಕ್ಷಣಿಕ ವರ್ಷ ಜೂನ್ 01ರಂದು ಕನಿಷ್ಠ 5.5 ವರ್ಷ ಆಗುವುದು ಕಡ್ಡಾಯವಾಗಿತ್ತು. ಈಗ ಈ ವಯೋಮಿತಿಯನ್ನು ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಒಂದನೇ ತರಗತಿಗೆ ದಾಖಲಾಗಲು ಮಗುವಿನ ವಯಸ್ಸು ಕಡ್ಡಾಯವಾಗಿ 6 ವರ್ಷ ಆಗಬೇಕಾಗುತ್ತದೆ.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ

ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿ ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪೂರ್ವ ಪ್ರಾಥಮಿಕ ( ಎಲ್.ಕೆ.ಜಿ ) ಹಾಗೂ ಪ್ರಾಥಮಿಕ ಶಾಲೆಯ 1ನೇ ತರಗತಿ ಮಕ್ಕಳನ್ನು ದಾಖಲಾತಿ ಮಾಡಲು ಕರ್ನಾಟಕ ಶಿಕ್ಷಣ ಕಾಯ್ದೆ – 1983ರ ನಿಯಮ -20 ರನ್ವಯ ಆಯಾ ಶೈಕ್ಷಣಿಕ ವರ್ಷದ ಜೂ.1 ಕ್ಕೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ ) 3 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳು ಎಂಬುದಾಗಿ 2017 ರ ಜ.13ರಲ್ಲಿ ವಯೋಮಿತಿ ನಿಗದಿಪಡಿಸಲಾಗಿತ್ತು. ಅದೇ ತಿಂಗಳ 18 ರಂದು ಆದೇಶವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದ್ದರು. 2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿವೆ. ಇವುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು / ಆದೇಶಗಳನ್ನು ರದ್ದುಪಡಿಸಿ, ಈ ಹೊಸ ಆದೇಶ ನೀಡಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಪಿಎಸ್‌ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡದ ಆರೋಪ ; ನ್ಯಾಯಾಂಗ ತನಿಖೆಗೆ ದಿನೇಶ​ ಗುಂಡೂರಾವ್ ಆಗ್ರಹ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement