ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ಮಾಲಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತ ಘಟನೆ ಮಂಗಳವಾರ ನಡೆದಿದೆ.
ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ (29) ಎಂಬವರು ಮೃತಪಟ್ಟವರು. ಪೆರುವಾಜೆ ಕ್ರಾಸ್ ಬಳಿ ಪ್ರವೀಣ ಅವರ ಕೋಳಿ ಅಂಗಡಿ ಇದ್ದು ರಾತ್ರಿ ಅಂಗಡಿ ಬಂದ್‌ ಮಾಡುತ್ತಿರುವಾಗ ಬೈಕಿನಲ್ಲಿ ಬಂದ ಮೂವರು ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ಶೋಧ ನಡೆಸುತ್ತಿದ್ದಾರೆ.
ಪ್ರವೀಣ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯಾರಾಗಿದ್ದರು. ಅದಾದ ವಾರದೊಳಗೆ ಪ್ರವೀಣ ಕೊಲೆಯಾಗಿದೆ. ಅವರ ಮೇಲೆ ಯಾವ ಕಾರಣಕ್ಕೆ ಹೆಲ್ಲೆ ನಡೆದಿದೆ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ. ಒಂದು ವಾರದ ಹಿಂದೆ ಬೆಳ್ಳಾರೆ ಸಮೀಪದ ಕಳಂಜದಲ್ಲಿ ಮಸೂದ್ ಎಂಬ ಯುವಕನ ಬರ್ಬರ ಕೊಲೆಯಾಗಿತ್ತು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement