ಕ್ಯಾಥೋಲಿಕರು ಇಲ್ಲದಿದ್ದರೆ ತಮಿಳುನಾಡು ಬಿಹಾರ ಆಗುತ್ತಿತ್ತು : ವಿವಾದಕ್ಕೆ ಕಾರಣವಾದ ತಮಿಳುನಾಡು ಸ್ಪೀಕರ್ ಹೇಳಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾಧ್ಯಕ್ಷ ಹಾಗೂ ಡಿಎಂಕೆ ನಾಯಕ ಎಂ.ಅಪ್ಪಾವು ಅವರು ರಾಜ್ಯದ ಅಭಿವೃದ್ಧಿಗೆ ಕ್ರಿಶ್ಚಿಯನ್ನರೇ ಕಾರಣವಾಗಿದ್ದು, ಕ್ಯಾಥೋಲಿಕ್ ಕ್ರಿಶ್ಚಿಯನ್ನರು ಇಲ್ಲದಿದ್ದರೆ ತಮಿಳುನಾಡು ಬಿಹಾರವಾಗುತ್ತಿತ್ತು ಎಂಬ ಒಂದು ತಿಂಗಳ ಹಿಂದಿನ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.
ಕಳೆದ ತಿಂಗಳು ಜೂನ್ 28 ರಂದು, ಅಪ್ಪಾವು ಮತ್ತು ಡಿಎಂಕೆ ಶಾಸಕ ಇನಿಗೊ ಇರುದಯರಾಜ್ ತಿರುಚಿರಾಪಳ್ಳಿಯಲ್ಲಿರುವ ಸೇಂಟ್ ಪಾಲ್ ಸೆಮಿನರಿಯ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅಪ್ಪಾವು, ಕ್ರೈಸ್ತ ಪಾದ್ರಿಗಳು ಮತ್ತು ಸಿಸ್ಟರ್ಸ್ ಇಲ್ಲದಿದ್ದರೆ ತಮಿಳುನಾಡು ಬಿಹಾರದಂತಾಗುತ್ತಿತ್ತು, ಕ್ಯಾಥೋಲಿಕ್ ಪಾದ್ರಿಗಳು ಮತ್ತು ಸಿಸ್ಟರ್‌ಗಳು ಮಾತ್ರ ನಾನು ಇಂದು ಈ ಸ್ಥಾನಕ್ಕೆ ಬೆಳೆಯಲು ಸಹಾಯ ಮಾಡಿದ್ದಾರೆ. ತಮಿಳುನಾಡು ಸರ್ಕಾರ ನಿಮ್ಮ ಸರ್ಕಾರ. ನೀವು. ಈ ಸರ್ಕಾರವನ್ನು ರಚಿಸಿದ್ದೀರಿ. ನಿಮ್ಮ ಪ್ರಾರ್ಥನೆ ಮತ್ತು ಉಪವಾಸವು ಈ ಸರ್ಕಾರವನ್ನು ರಚಿಸಿತು. ಕ್ಯಾಥೋಲಿಕ್ ಕ್ರಿಶ್ಚಿಯನ್ನರು ಮತ್ತು ಕ್ರಿಶ್ಚಿಯನ್ ಪಾದ್ರಿಗಳು ಸಾಮಾಜಿಕ ನ್ಯಾಯ ಮತ್ತು ದ್ರಾವಿಡ ಮಾದರಿ ಸರ್ಕಾರಕ್ಕೆ ಮುಖ್ಯ ಕಾರಣ ಎಂದು ಅವರು ಹೇಳಿದ್ದರು.

ನೀವು (ಕ್ಯಾಥೋಲಿಕ್ ಕ್ರಿಶ್ಚಿಯನ್ನರು) ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ, ನಿಮ್ಮ ಎಲ್ಲಾ ಸಮಸ್ಯೆಗಳನ್ನು ಪಟ್ಟಿ ಮಾಡಿ ನೇರವಾಗಿ ಮುಖ್ಯಮಂತ್ರಿಗೆ ನೀಡಿ, ಅವರು ಏನನ್ನೂ ನಿರಾಕರಿಸುವುದಿಲ್ಲ ಮತ್ತು ಎಲ್ಲವನ್ನೂ ಪರಿಹರಿಸುತ್ತಾರೆ. ಏಕೆಂದರೆ ಈ ಸರ್ಕಾರಕ್ಕೆ ನೀವೇ ಕಾರಣ ಎಂದು ಮುಖ್ಯಮಂತ್ರಿಗೆ ತಿಳಿದಿದೆ. ಇದು ನಿಮ್ಮ ಸರ್ಕಾರ ಮತ್ತು ಅವರು ನಿಮ್ಮ ಮುಖ್ಯಮಂತ್ರಿ. ಇದರಲ್ಲಿ ನಾನು ನಿಮ್ಮೊಂದಿಗಿದ್ದೇನೆ. ತಮಿಳುನಾಡಿನಿಂದ ಕ್ರಿಶ್ಚಿಯನ್ನರನ್ನು ತೊಲಗಿಸಿದರೆ ಯಾವುದೇ ಅಭಿವೃದ್ಧಿಯಾಗುವುದಿಲ್ಲ. ತಮಿಳುನಾಡಿನ ಅಭಿವೃದ್ಧಿಗೆ ಕ್ಯಾಥೋಲಿಕ್ ಕ್ರಿಶ್ಚಿಯನ್ನರು ಮುಖ್ಯ ಕಾರಣ. ಇಂದಿನ ತಮಿಳುನಾಡು ನಿಮ್ಮ ಮೇಲೆ ನಿರ್ಮಾಣವಾಗಿದೆ. ಎಂದು ಅವರು ಹೇಳಿದ್ದರು.

ಪ್ರಮುಖ ಸುದ್ದಿ :-   ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು 'ಸಹಾಯ' ಮಾಡಿದ್ದೇವೆ...ಕದನ ವಿರಾಮಕ್ಕೆ 'ದೊಡ್ಡ ಕಾರಣ' ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್‌

ಇದೀಗ ಅಪ್ಪಾವು ಅವರ ತಿಂಗಳ ಹಿಂದಿನ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿಯು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿತು ಮತ್ತು ಈ ವಿಷಯದ ಬಗ್ಗೆ ತಮಿಳುನಾಡು ವಿಧಾನಸಭಾ ಸ್ಪೀಕರ್ ಅವರ ಹೇಳಿಕೆಯನ್ನು ಖಂಡಿಸಿದೆ.
ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ವಕ್ತಾರ ನಾರಾಯಣನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಅಪ್ಪಾವು ಅವರ ಭಾಷಣಕ್ಕೆ ಸ್ಲ್ಯಾಮ್ ಮಾಡಿದ್ದಾರೆ.
ಇದು ಡಿಎಂಕೆಯ ಜಾತ್ಯತೀತಯೇ? ಅವರು ತಮ್ಮನ್ನು ಜಾತ್ಯತೀತ ಪಕ್ಷ ಎಂದು ಕರೆದುಕೊಳ್ಳುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಡಿಎಂಕೆ ಹಿಂದೂ ವಿರೋಧಿ ಪಕ್ಷ ಎಂಬುದು ಈಗ ಸಾಬೀತಾಗಿದೆ” ಎಂದು ಅವರು ಹೇಳಿದರು.
ಏತನ್ಮಧ್ಯೆ, ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅಪ್ಪಾವು ಟೀಕಿಸಿದರು.
ಬಿಜೆಪಿ ನನ್ನ ಭಾಷಣವನ್ನು ಪ್ರಚಾರ ಮಾಡುತ್ತಿದ್ದರೆ ಅದು ಒಳ್ಳೆಯದು, ನಾನು ಅದನ್ನು ಹೇಳಲಿಲ್ಲ ಎಂದು ನಾನು ಹೇಳುವುದಿಲ್ಲ. ಹೌದು, ನಾನು ಹೇಳಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಕಟ್‌ ಮಾಡಿದ ಮಾಡಿದ ಆವೃತ್ತಿಗಳು ಮಾತ್ರ ಹರಡುತ್ತಿವೆ, ನಾನು ಏನು ಮಾತನಾಡಿದರೂ ಅದು ಕೇವಲ ಇತಿಹಾಸ, ಅದು ಇರಬೇಕು. ಇದರಲ್ಲಿ ಯಾವುದೇ ರಾಜಕೀಯ ಬೇಡ” ಎಂದು ಅಪ್ಪಾವು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕೋಲ್ಕತ್ತಾ ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸ್ತೇನೆ ': ಬಾಂಗ್ಲಾದೇಶ ಮೂಲಭೂತವಾದಿಯಿಂದ ಹಿಂದೂಗಳ ವಿರುದ್ಧ ಬೆದರಿಕೆ ವೀಡಿಯೊ ವೈರಲ್‌

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement