ಬೆಂಗಳೂರು: 2.68 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ

ಬೆಂಗಳೂರು: ಇಲ್ಲಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ ಅವರಿಂದ 2.68 ಕೋಟಿ ರೂ. ಮೌಲ್ಯದರಕ್ತಚಂದನದ ತುಂಡುಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ವಿನೋದ, ಲಕ್ಷ್ಮಯ್ಯ, ಸಂಜಯ್, ರಾಜು, ಕೃಷ್ಣ ಎಂದು ಗುರುತಿಸಲಾಗಿದ್ದು, ಅವರಿಂದ ಒಟ್ಟು 1693 ಕೆಜಿ ತೂಕದ ರಕ್ತಚಂದನದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯ ನ್ಯೂ ಟಿಂಬರ್ ಲೇಔಟ್‍ನಲ್ಲಿ ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ಮಾರಾಟ ಮಾಡಲು ಮುಂದಾಗಿರುವ ಕುರಿತು ಮಾಹಿತಿ ದೊರೆತ ನಂತರ ಖಚಿತ ಬ್ಯಾಟರಾಯನಪುರ ಠಾಣೆ ಇನ್ಸ್‍ಪೆಕ್ಟರ್ ಶಂಕ ನಾಯಕ್ ಅವರು ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಆರೋಪಿ ವಿನೋದ್ ಸೆರೆ ಸಿಕ್ಕರೆ ಮತ್ತೊಬ್ಬ ಆರೋಪಿ ಅಜಯ ಪರಾರಿಯಾಗಿದ್ದಾನೆ. ಆರೋಪಿಯಿಂದ 17 ಕೆಜಿ ತೂಕದ 2 ರಕ್ತಚಂದನ ಮರದ ತುಂಡುಗಳು ಹಾಗೂ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ವಿನೋದನನ್ನು ವಿಚಾರಣೆಗೊಳಪಡಿಸಿದಾಗ ಆತ ನೀಡಿದ ಮಾಹಿತಿ ಮೇರೆಗೆ ಹೆಸರುಘಟ್ಟದಲ್ಲಿರುವ ಒಂಟಿ ಮನೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಟ್ಟು 1,580 ಕೆಜಿ ತೂಕದ ರಕ್ತಚಂದನ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ವಿಚಾರಣೆ ವೇಳೆ ನೈಸ್ ರೋಡ್ ಜಂಕ್ಷನ್‍ನಲ್ಲಿ ರಕ್ತಚಂದನ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಯೂ ದಾಳಿ ನಡೆಸಿ ಆರೋಪಿಗಳಾದ ಲಕ್ಷ್ಮಯ್ಯ, ಸಂಜಯ್, ರಾಜು ಮತ್ತು ಕೃಷ್ಣ ಎಂಬವರನ್ನು ಬಂಧಿಸಿ 113 ಕೆಜಿ ರಕ್ತಚಂದನ ಮರದ ತುಂಡುಗಳು ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ಬಿ.ನಿಂಬರಗಿ ಮಾರ್ಗದರ್ಶನದಲ್ಲಿ ಕೆಂಗೇರಿ ಗೇಟ್ ಉಪವಿಭಾಗದ ಎಪಿಸಿ ಕೋದಂಡರಾಮ್ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಶಂಕರ ನಾಯಕ್‌, ತಂಡ ಕಾರ್ಯಾಚರಣೆ ನಡೆಸಿತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement