3ನೇ ದಿನ ಸೋನಿಯಾ ಗಾಂಧಿಗೆ 3 ಗಂಟೆಗಳ ಕಾಲ ಇ.ಡಿ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮೂರನೇ ದಿನದ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಕ್ತಾಯಗೊಳಿಸಿದೆ.
ಸೋನಿಯಾ ಗಾಂಧಿ ಅವರನ್ನು ಇಂದು, ಬುಧವಾರ ಜಾರಿ ನಿರ್ದೇಶನಲಾಯ ( ಇ.ಡಿ) ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಸದ್ಯಕ್ಕೆ ಸೋನಿಯಾ ಗಾಂಧಿ ಅವರಿಗೆ ಹೊಸ ಸಮನ್ಸ್ ಜಾರಿಯಾಗಿಲ್ಲ ಎಂದು ವರದಿ ತಿಳಿಸಿದೆ. ಸೋನಿಯಾ ಗಾಂಧಿ ಇಂದು, ಬುಧವಾರ ಬೆಳಗ್ಗೆ 11 ಗಂಟೆಗೆ ತಮ್ಮ ಮಕ್ಕಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಜೊತೆ ದೆಹಲಿಯಲ್ಲಿರುವ ಇಡಿ ಕಚೇರಿ ತಲುಪಿದ್ದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ
1938 ರಲ್ಲಿ ಮಾಜಿ ಪ್ರಧಾನಿ ಜವಹರ್​​ಲಾಲ್ ನೆಹರು, ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರೊಂದಿಗೆ ಸೇರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ಥಾಪಿಸಿದ್ದರು. ಆದರೆ ಅಸೋಸಿಯೇಟೆಡ್ ಜನರಲ್ ಲಿಮಿಟೆಡ್​​​​ (AJL) ಪ್ರಕಟಿಸುತ್ತಿದ್ದ ಈ ಪತ್ರಿಕೆಯು 2008 ರಲ್ಲಿ ಸಾಲದ ಸುಳಿಗೆ ಸಿಲುಕಿದ ಕಾರಣ ತಾತ್ಕಾಲಿಕವಾಗಿ ಪ್ರಕಟಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಯ್ತು. ತೀವ್ರ ನಷ್ಟದಲ್ಲಿದ್ದ ಸಂಸ್ಥೆಯ ಷೇರುಗಳನ್ನು 2011ರಲ್ಲಿ ಯಂಗ್ ಇಂಡಿಯಾ ಸಂಸ್ಥೆಗೆ ವರ್ಗಾಯಿಸಲಾಯಿತು.
ಯಂಗ್ ಇಂಡಿಯಾ ಸಂಸ್ಥೆಯನ್ನು 2010ರಲ್ಲಿ ಆಗಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಇಬ್ಬರೂ ತಲಾ, ಶೇ.38 ರಷ್ಟು ಷೇರು ಹೂಡಿಕೆ ಮಾಡಿದ್ದರು. ರಾಹುಲ್ ಗಾಂಧಿ ಸಂಸ್ಥೆಯ ನಿರ್ದೇಶಕನ ಸ್ಥಾನ ವಹಿಸಿಕೊಂಡರು. ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಕಂಪನಿಯ ಶೇ. 76ರಷ್ಟು ಷೇರುಗಳನ್ನು ಹೊಂದಿದ್ದರೆ, ಉಳಿದ ಷೇರುಗಳನ್ನು ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಹೊಂದಿದ್ದರು. ನಷ್ಟದಲ್ಲಿದ್ದ ಎಜೆಎಲ್​​​​​​​​​​​​​​ ಅನ್ನು ಯಂಗ್ ಇಂಡಿಯಾ ಲಿಮಿಟೆಟ್​​​​​​​​​ ಖರೀದಿಸಿತ್ತು.
ಆದರೆ ಎಜೆಎಲ್ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ 2012 ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಯಂಗ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ಎಜೆಎಲ್​​ನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಳ್ಳುವಾಗ ಯಾವುದೇ ನೋಟೀಸ್ ನೀಡಿರಲಿಲ್ಲ. ಹಾಗೂ ನಮ್ಮ ಹಿರಿಯರು ಹೊಂದಿದ್ದ ಷೇರುಗಳನ್ನು ನಮ್ಮ ಸಮ್ಮತಿ ಇಲ್ಲದೆ ವರ್ಗಾಯಿಸಲಾಗಿದೆ ಎಂದು ಮಾಜಿ ಕಾನೂನು ಸಚಿವ ಶಾಂತಿ ಭೂಷಣ್, ಅಲಹಾಬಾದ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಸೇರಿದಂತೆ ಅನೇಕರು ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement