ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ ಮೂರು ಡಜನ್‌ಗಿಂತಲೂ ಹೆಚ್ಚು ಬಂಗಾಳದ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ನಟ ಮಿಥುನ್ ಚಕ್ರವರ್ತಿ ಹೇಳಿದ್ದಾರೆ. ಶಿಕ್ಷಕರ ನೇಮಕಾತಿ ದೊಡ್ಡ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಅವರ ಸಹಾಯಕಿ ಬಂಧನದಿಂದ ಪಕ್ಷದೊಳಗೆ ಭಾರೀ ಅಸಮಾಧಾನ ಉಂಟಾಗಿದೆ ಎಂದು ಹೇಳಿದ್ದಾರೆ.
“ನಾನು ನಿಮಗೆ ಎಲ್ಲಾ ಬ್ರೇಕಿಂಗ್ ನ್ಯೂಸ್ ನೀಡುತ್ತೇನೆ. ಈ ಸಮಯದಲ್ಲಿ, 38 ಟಿಎಂಸಿ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಅವರಲ್ಲಿ 21 ಮಂದಿ ನನ್ನೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ ಎಂದು ಮಿಥುನ್ ಚಕ್ರವರ್ತಿ ಹೇಳಿದರು.
ಕಳೆದ ವರ್ಷ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯು ಬಾಲುವುಡ್‌ನ ಈ ನಟನನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಗೆಲುವು ಸಾಧಿಸುವ ಪ್ರಯತ್ನದಲ್ಲಿತ್ತು.
ಬಿಜೆಪಿಯ “ಮುಸ್ಲಿಂ ವಿರೋಧಿ” ನಿಲುವಿನ ಬಗ್ಗೆ ಮಾತನಾಡಿದ ಅವರು, “ಇದೀಗ ದೇಶದ ಮೂರು ದೊಡ್ಡ ತಾರೆಗಳು ಮುಸ್ಲಿಮರು – ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಅಮೀರ್ ಖಾನ್. ಹೀಗಿರುವಾಗ ಅದು ಹೇಗೆ ಸಾಧ್ಯ? 18 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬಿಜೆಪಿ ಅವರನ್ನು ದ್ವೇಷಿಸಿದರೆ ಅಥವಾ ಹಿಂದೂಗಳು ಅವರನ್ನು ಪ್ರೀತಿಸದಿದ್ದರೆ ಅವರ ಚಲನಚಿತ್ರಗಳು ಈ ರಾಜ್ಯಗಳಲ್ಲಿ ಹೇಗೆ ದೊಡ್ಡ ಕಲೆಕ್ಷನ್ ಮಾಡುತ್ತವೆ? ಎಂದು ಪ್ರಶ್ನಿಸಿದರು.
ಹಿಂದೂಗಳು, ಮುಸ್ಲಿಮರು ಮತ್ತು ಸಿಖ್ಖರು ನನ್ನನ್ನು ಪ್ರೀತಿಸುವುದರಿಂದ ನಾನು ಇಂದು ಇರುವ ಸ್ಥಿತಿಗೆ ತಲುಪಿದ್ದೇನೆ” ಎಂದು ಅವರು ಹೇಳಿದರು.
ರಾಜ್ಯದಲ್ಲಿ ಶಿಕ್ಷಕರ ಹಗರಣಕ್ಕೆ ಸಂಬಂಧಿಸಿದಂತೆ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಅವರು,
“ಯಾವುದೇ ಪುರಾವೆಗಳಿಲ್ಲದಿದ್ದರೆ, ಅವರು ಭಯಪಡಲು ಯಾವುದೇ ಕಾರಣವಿಲ್ಲ. ಆದರೆ ಅವರು ತಪ್ಪು ಮಾಡಿದ್ದರೆ ಜಗತ್ತಿನ ಯಾವ ಶಕ್ತಿಯೂ ಆವರನ್ನು ರಕ್ಷಿಸಲಾರದು ಎಂದು ಹೇಳಿದರು. ಕೋಲ್ಕತ್ತಾದಲ್ಲಿರುವ ಸಹಾಯಕಿಯ ಮನೆಯಿಂದ 21 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡ ನಂತರ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿಯನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ.
ಶಿಕ್ಷಕರ ನೇಮಕಾತಿ ಹಗರಣದಲ್ಲಿ 2,000 ಕೋಟಿ ರೂಪಾಯಿ ವಂಚನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ