ಪ್ರವೀಣ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ: 25 ಲಕ್ಷ ರೂ.ಗಳ ಚೆಕ್‌ ಹಸ್ತಾಂತರ

ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕುಟುಂಬಸ್ಥರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿಗಳು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರ್ಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇದೆ ಎಂದು ಧೈರ್ಯ ತುಂಬಿದರು. ಕುಟುಂಬಸ್ಥರ ಅಳಲು ಆಲಿಸಿದ್ದಾರೆ.
ನನಗೆ ಬಂದ ಗತಿ ಮುಂದೆ ಯಾರಿಗೂ ಬರಬಾರದು. ಈ ಕೊಲೆಯ ಘಟನೆಗಳು ಮತ್ತೆ ಮರುಕಳಿಸಬಾರದು. ಇದು ಇಲ್ಲಿಗೆ ಕೊಎಗೊಳ್ಳಬೇಕು’ ಎಂದು ಪ್ರವೀಣ್​ರ ಪತ್ನಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಹೇಳುತ್ತ ಗದ್ಗದಿತರಾದರು. ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಪಕ್ಷಕ್ಕಾಗಿ ನನ್ನ ಪತಿ ಹಗಲು-ರಾತ್ರಿ ದುಡಿದಿದ್ದಾರೆ. ನನ್ನ ಪತಿಗೆ ಆದ ಸ್ಥಿತಿ ಬೇರೆ ಕಾರ್ಯಕರ್ತರಿಗೆ ಬರಬಾರದು
ಈ ವೇಳೆ 25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಪ್ರವೀಣ್​ ಇಡೀ ಕುಟುಂಬಕ್ಕೆ ಆಧಾರವಾಗಿದ್ದ. ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂ. ನೀಡಿದ್ದೇವೆ. ಕುಟುಂಬಸ್ಥರ ಮುಂದಿನ ಭವಿಷ್ಯಕ್ಕೆ ಎಲ್ಲ ಸಹಕಾರ ನೀಡುತ್ತೇವೆ. ಕಟುಕರಿಗೆ ಶಿಕ್ಷೆ ಆದಾಗ ಮಾತ್ರ ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಪ್ರವೀಣ್​ ಹತ್ಯೆ ಅತ್ಯಂತ ಅಮಾನವೀಯ. ಇದೊಂದು ಪೂರ್ವ ಯೋಜಿತ ಕೃತ್ಯ. ದಕ್ಷಿಣ ಕನ್ನಡ ಭಾಗದಲ್ಲಿ ಕಳೆದ ಹತ್ತು ವರ್ಷದಿಂದ ಸಮಾಜಘಾತುಕಶಕ್ತಿಗಳ ಕೃತ್ಯ ಹೆಚ್ಚಾಗಿದೆ. ಕೇವಲ ಕೊಲೆ ಪ್ರಕರಣ ಅಲ್ಲ, ದೇಶ ಛಿದ್ರ ಮಾಡುವ ವಿಛಿದ್ರಕಾರಿಗಳ ಕೃತ್ಯ. ಈಗಾಗಲೇ ತನಿಖೆ ಆರಂಭವಾಗಿದೆ. ಶೀಘ್ರವೇ ಎಲ್ಲ ಆರೋಪಿಗಳನ್ನೂ ಬಂಧಿಸಲಾಗವುದು ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮೊದಲಾದವರು ಸಹ ನಿವಾಸಕ್ಕೆ ಆಗಮಿಸಿದ್ದರು.

5 / 5. 1

ಶೇರ್ ಮಾಡಿ :

  1. geek

    ಮುಖ್ಯಮಂತ್ರಿಗಳೇ ಪ್ರವೀಣ್ ಮನೆಗೆ ಭೇಟಿ ನೀಡುವಾಗ ಅದೇ ಗ್ರಾಮದ ಮಸೂದ್ ಮನೆಗೂ ಭೇಟಿ ನೀಡಿ, ರಾಜಧರ್ಮ ಪಾಲಿಸಿ
    ಬೊಮ್ಮಾಯಿಯವರು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿ. ಆರು ಕೋಟಿ ಕನ್ನಡಿಗರಿಗೂ ಅವರೇ ಮುಖ್ಯಮಂತ್ರಿ. ಬಿಜೆಪಿ ಪಕ್ಷದವರಿಗೆ, ಒಂದು ಮತ ಧರ್ಮಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ. ಬೆಳ್ಳಾರೆಯಲ್ಲಿ ಕೊಲೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಇಂದು ನೀವು ಭೇಟಿ ನೀಡುವಾಗ ಅದೇ ಗ್ರಾಮದಲ್ಲಿ ವಾರದ ಹಿಂದೆ ಮತೀಯ ದ್ವೇಷಕ್ಕೆ ಬಲಿಯಾದ ಅಮಾಯಕ ಹುಡುಗ ಮಹಮ್ಮದ್ ಮಸೂದ್ ಮನೆಗೂ ಭೇಟಿ ನೀಡಬೇಕು. ಪ್ರವೀಣ್ ನ ವಿಧವೆ ಹೆಂಡತಿ, ಅನಾಥ ತಂದೆ ತಾಯಿಯರಿಗೆ ಸಾಂತ್ವನ ಹೇಳುವಾಗ, ಮಸೂದ್ ನ ವಿಧವೆ ತಾಯಿಗೂ ಸಾಂತ್ವನ ಹೇಳಬೇಕು. ಯಾವುದೇ ಕಾರಣಕ್ಕು ತಾರತಮ್ಯ ಎಸಗಬಾರದು. ಕೊಲೆ ಗೀಡಾದ ಎರಡೂ ಕುಟುಂಬದ ಹೆಣ್ಣು ಜೀವಗಳು ಸಮಾನವಾಗಿ ನೊಂದಿವೆ. ಮುಖ್ಯಮಂತ್ರಿಗಳೇ ರಾಜಧರ್ಮ ಪಾಲಿಸಿ.‌ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಅಯೋಗ್ಯರಾಗಿ ಬಿಡುತ್ತೀರಿ. ಕನ್ನಡ ನಾಡಿನ ಮಹಾನ್ ಪರಂಪರೆಗೆ, ಮುಖ್ಯಮಂತ್ರಿ ಸ್ಥಾನದ ಘನತೆಗೆ ಅಪಚಾರ ಎಸಗಬೇಡಿ‌. ಇದು ನಿಮ್ಮಲ್ಲಿ ಕಳಕಳಿಯ ಮನವಿ.
    ಮುನೀರ್ ಕಾಟಿಪಳ್ಳ
    ರಾಜ್ಯಾಧ್ಯಕ್ಷರು, ಡಿವೈಎಫ್ಐ ಕರ್ನಾಟಕ

ನಿಮ್ಮ ಕಾಮೆಂಟ್ ಬರೆಯಿರಿ

advertisement