ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ಹತ್ಯೆ ಪ್ರಕರಣ : 21 ಶಂಕಿತರ ವಶಕ್ಕೆ ಪಡೆದು ವಿಚಾರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಒಂದು ದಿನದ ನಂತರ, ಬುಧವಾರ ತಡರಾತ್ರಿ ಮತ್ತೊಂದು ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಈವರೆಗೆ ಒಟ್ಟು 21 ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದ ಈ 21 ಶಂಕಿತರಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯ ಸದಸ್ಯರೂ ಇದ್ದಾರೆ ಎಂದು ಹೇಳಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.
ಪ್ರವೀಣ್ ನೆಟ್ಟಾರು ಹತ್ಯೆ ಈ ಪ್ರಕರಣದಲ್ಲಿ ಭಾಗಿಯಾದವರನ್ನ ಯಾರನ್ನ ಬಿಡುವುದಿಲ್ಲ. ಎಲ್ಲ ಆಯಾಮಗಳಿಂದಲೂ ತನಿಖೆ ಮಾಡಲಾಗುವುದು ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ತನಿಖೆಗAಗಿ ಆರು ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಯಾರನ್ನೂ ಬಂಧಿಸಿಲ್ಲ ಎಂದು ಅಲೋಕಕುಮಾರ ಹೇಳಿದ್ದಾರೆ.

ಬುಧವಾರ ಮಧ್ಯರಾತ್ರಿ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ ಅವರ ಹತ್ಯೆ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಒಂದು ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇಂದು ಗುರುವಾರ ಆಯೋಜಿಸಿದ್ದ ಹಲವಾರು ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು. ಮುಖ್ಯಮಂತ್ರಿಗಳು ಕೂಡ ಬೆಳ್ಳಾರೆಗೆ ಭೇಟಿ ನೀಡಿ ಪ್ರವೀಣ್ ಕುಟುಂಬವನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಈ ಹತ್ಯೆಯ ನಂತರ ನಮ್ಮ ಹೃದಯದಲ್ಲಿ ಕೋಪವಿದೆ. ಶಿವಮೊಗ್ಗದಲ್ಲಿ ಹರ್ಷ (ಬಜರಂಗದಳ ಕಾರ್ಯಕರ್ತ) ಹತ್ಯೆಯ ನಂತರ ಕೆಲವೇ ತಿಂಗಳುಗಳಲ್ಲಿ ಈ ಘಟನೆಯು ನನಗೆ ನೋವುಂಟುಮಾಡಿದೆ” ಎಂದು ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಬೆಳ್ಳಾರೆ ನೆಟ್ಟಾರು ನಿವಾಸಿ ಪ್ರವೀಣ್ ಅವರನ್ನು ಮಂಗಳವಾರ ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಆ ಪ್ರದೇಶದ ಅವರ ಕೋಳಿ ಅಂಗಡಿಯ ಮುಂದೆ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು. ನಂತರ ಅವರು ಆಸ್ಪತ್ರೆಗೆ ಒಯ್ಯುವಾಗ ಮೃತಪಟ್ಟಿದ್ದರು.
ಹತ್ಯೆಯ ನಂತರ, ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಉದ್ವಿಗ್ನತೆ ಉಂಟಾಗಿದೆ, ಕಲ್ಲು ತೂರಾಟ ಮತ್ತು ಪೊಲೀಸ್ ಲಾಠಿಚಾರ್ಜ್ ನಿದರ್ಶನಗಳು ವರದಿಯಾಗಿವೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement