ತರಗತಿಯಲ್ಲಿ ಬಾಲಕನಿಂದ ಕೈಗೆ ಮಸಾಜ್‌ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ: ವೀಡಿಯೊ ವೈರಲ್ ಆದ ನಂತರ ಅಮಾನತು | ವೀಕ್ಷಿಸಿ

ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಸರ್ಕಾರಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಈ ವಾರದ ಆರಂಭದಲ್ಲಿ ಪೋಖಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ ಕುರ್ಚಿಯ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿರುವಾಗ ವಿದ್ಯಾರ್ಥಿಯೊಬ್ಬ ತನ್ನ ಪಕ್ಕದಲ್ಲಿ ನಿಂತು ಶಾಲಾ ಸಮಯದಲ್ಲಿ ಅವರ ಕೈಗೆ ಮಸಾಜ್ ಮಾಡುವುದನ್ನು ವೀಡಿಯೊ ತೋರಿಸುತ್ತದೆ.

ಇತರ ಮಕ್ಕಳು ತಮ್ಮ ಸ್ವಂತ ಕೆಲಸಗಳನ್ನು ಮಾಡುವುದನ್ನು ಕಾಣಬಹುದು. ಈ ವಿಡಿಯೋವನ್ನು ತರಗತಿಯಲ್ಲಿ ಹಾಜರಿದ್ದ ಯಾರೋ ಚಿತ್ರೀಕರಿಸಿದ್ದಾರೆ ಮತ್ತು ಅದು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಬಾಲಕ ತನ್ನ ಎಡಗೈಗೆ ಮಸಾಜ್ ಮಾಡುತ್ತಿದ್ದಾಗ ಶಿಕ್ಷಕಿ ಬಾಟಲಿಯಿಂದ ನೀರು ಕುಡಿಯುತ್ತಿರುವುದು ಕಂಡುಬಂದಿದೆ. ಮಸಾಜ್‌ ನಡೆಯುತ್ತಿರುವಾಗ ತರಗತಿಯ ಇತರ ಮಕ್ಕಳ ಮೇಲೆ ಟೀಚರ್ ಕೂಗಾಡುತ್ತಿರುವುದು ಕಂಡು ಬರುತ್ತಿದೆ. ಶಿಕ್ಷಕಿಯನ್ನು ಊರ್ಮಿಳಾ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಬವನ್ ಬ್ಲಾಕ್‌ನಲ್ಲಿರುವ ಪೋಖಾರಿ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

ವೀಡಿಯೋ ವೈರಲ್ ಆದ ನಂತರ ಶಿಕ್ಷಾ ಅಧಿಕಾರಿ (ಬಿಎಸ್‌ಎ) ವಿ.ಪಿ ಸಿಂಗ್ ಅವರು ಘಟನೆಯನ್ನು ಗಮನಿಸಿದರು ಮತ್ತು ತನಿಖೆಯನ್ನು ಪ್ರಾರಂಭಿಸಲು ಮತ್ತು ಇಲಾಖಾ ಕ್ರಮ ಕೈಗೊಳ್ಳುವಂತೆ ಬ್ಲಾಕ್ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕಿಯನ್ನು ನಂತರ ಅಮಾನತುಗೊಳಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement