ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದು, ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಸವಣೂರು ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಷ್‌ ಸೋನಾವಣೆ ಮಾಹಿತಿ ನೀಡಿದ್ದಾರೆ.ಇಬ್ಬರು ಆರೋಪಿಗಳನ್ನು ಕೇರಳ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪ್ರಕರಣ ನಡೆಯುವ ಮೊದಲು ಮತ್ತು ನಂತರ ಅಲ್ಲೇ ಓಡಾಡಿದ್ದ. ಸಿಸಿಟಿವಿ ಆಧಾರದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಂತಕರಿಗೆ ಪೂರ್ವಾಪರ ಮಾಹಿತಿ ನೀಡಿದ ಬಗ್ಗೆ ತಿಳಿದುಬಂದಿದೆ ಎಂದು ಹೇಳಲಾಗಿದೆ.

ಝಾಕಿರ್ ಮತ್ತು ಶಫೀಕ್ ಇಬ್ಬರು ಆರೋಪಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದೊಂದಿಗೆ “ಶಂಕಿತ ಸಂಪರ್ಕ” ಹೊಂದಿದ್ದಾರೆ. “ಆದರೆ ನಾವು ಆ ಲಿಂಕ್‌ಗಳು ಮತ್ತು ಅವುಗಳ ಉದ್ದೇಶಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಇಬ್ಬರನ್ನೂ ನಿನ್ನೆ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಇಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ವಿಚಾರಣೆಗೊಳಪಡಿಸಿದ ಬಳಿಕ ಇನ್ನಷ್ಟು ಮಂದಿಯನ್ನು ಬಂಧಿಸಬಹುದು ಎಂದು ಎಡಿಜಿಪಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳ ಸದಸ್ಯರು ಸೇರಿದಂತೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್‌ ಕೋಳಿ ಅಂಗಡಿ ಬಳಿ ಮೂವರು ಅಪರಿಚಿತರು ಬೈಕ್‌ ನಲ್ಲಿ ಬಂದು ಪ್ರವೀಣ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯೊಗೊಂಡಿದ್ದ ಪ್ರವೀಣ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ತೀವ್ರ ಗಾಯಗಳಿಂದ ಅವರು ಮೃತಪಟ್ಟಿದ್ದಾರೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement