ಪ್ರವೀಣ್ ನೆಟ್ಟಾರ ಹತ್ಯೆ ಘಟನೆ ಮಾಸುವ ಮುನ್ನವೇ ದಕ್ಷಿಣ ಕನ್ನಡದಲ್ಲಿ ಮತ್ತೊಬ್ಬ ಯುವಕನ ಹತ್ಯೆ

ಮಂಗಳೂರು: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ ನಡೆದಿದೆ.
ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಮಹಮ್ಮದ್‌ ಫಾಜಿಲ್  (23) ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗಾಯಾಳು ಫಾಜಿಲ್​ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಶುಕ್ರವಾರ ಜನ್ಮದಿನದ ಆಚರಣೆಗೆಂದು ಚಪ್ಪಲಿ ಮತ್ತು ಸ್ಮಾರ್ಟ್ ವಾಚ್ ಖರೀದಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಫಾಝಿಲ್ ಮೇಲೆ ನೋಡನೋಡುತ್ತಿದ್ದಂತೆ ತಂಡವೊಂದು ಹಲ್ಲೆ ಮಾಡಿದೆ. ಅಂಗಡಿಯ ಎದುರಿನ ಜಗಲಿಯಲ್ಲೇ ಮಾರಕಾಯುಧಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗದೆ ಗಂಭೀರವಾಗಿ ಗಾಯಗೊಂಡು ಕೆಳಗಿ ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ, ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್‌ನಲ್ಲಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮಂಗಳೂರಿನ ಸುರತ್ಕಲ್‌ಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ರವಾನಿಸಲಾಗಿದೆ.
ನಾಲ್ಕರಿಂದ ಐದು ಜನ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ ಎಂದು ಮಂಗಳೂರು ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು ಸುರತ್ಕಲ್, ಮುಲ್ಕಿ, ಬಜಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಮೆ ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಹತ್ಯೆಯ ಬಗ್ಗೆ ತನಿಖೆ ನಡಿಸಿ ಆರೋಪಿಗಳ ಬಂಧನ ಮಾಡುತ್ತೇವೆ. ಎಂದು ಹೇಳಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement