ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕರೋರ್ವರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ವಾಸರಕುದ್ರಿಗೆ ಗ್ರಾಮದ ನಿವಾಸಿ ಅರವಿಂದ ಬೀರಾ ಆಗೇರ (49) ಮೃತ ವ್ಯಕ್ತಿಯಾಗಿದ್ದು ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಸಮಾಜಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇವರು ಮನೆಯಿಂದ ಕಾಲೇಜಿಗೆ ತೆರಳಲು ಬೈಕ್ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಬೆಳಸೆ ಗ್ರಾಮ ಪಂಚಾಯತದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲಿಯೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಖಾಸಗಿ ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ವ್ಯಕ್ತಿ ಮೃತ ಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಪಿ.ಎಂ.ಜ್ಯೂನಿಯರ್ ಕಾಲೇಜಿನ ಪ್ರಾಚಾರ್ಯ ಪಾಲ್ಗುಣ ಗೌಡ, ನಿವೃತ್ತ ಪ್ರಾಚಾರ್ಯ ರವೀಂದ್ರ ಕೇಣಿ, ಎನ್. ಸಿ.ಸಿ ಕಮಾಂಡರ್ ಗಣಪತಿ ತಾಂಡೇಲ್ ಮತ್ತಿತರ ಸಿಬ್ಬಂದಿಗಳು ಆಸ್ಪತ್ರೆ ಭೇಟಿ ನೀಡಿ ಸಂತಾಪ ಸೂಚಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement