ಮೃತ ಪ್ರವೀಣ ಕುಟುಂಬಕ್ಕೆ 10 ಲಕ್ಷ ರೂ.ಗಳ ವೈಯಕ್ತಿಕ ನೆರವು: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಗುರುವಾರ ಮಾಧ್ಯಮದವರ ಜೊತೆ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ ಎಂದು ಹೇಳಿದರು.

10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ಗದ್ಗದಿತರಾದರು.
ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪಕ್ಷದ ಕಾರ್ಯಕರ್ತರ ಆಕ್ರೋಶ ನಮಗೆ ಅರ್ಥವಾಗುತ್ತದೆ. ಅಪರಾಧಿಗಳನ್ನು ಬಿಜೆಪಿ ಸರ್ಕಾರ ಹೆಡೆಮುರಿ ಕಟ್ಟಲಿದೆ ಎಂದು ಅವರು ಹೇಳಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement