ಸುರತ್ಕಲ್ ಕೊಲೆ ಪ್ರಕರಣ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ.
ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣದ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಜು.29) ರಜೆ ಘೋಷಿಸಲಾಗಿದೆ.
ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆ ಬಳಿ ವ್ಯಕ್ತಿಯೋರ್ವನ ಮೇಲೆ ನಾಲ್ವರ ತಂಡ ತಲವಾರು ದಾಳಿ ಮಾಡಿ ಹತ್ಯೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ಸುರತ್ಕಲ್​ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ.
ವದಂತಿಗಳಿಗೆ ಕಿವಿಗೊಡಬೇಡಿ
ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಫಾಜಿಲ್ ಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ಕೊಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ. ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಶಾಂತಿ ಕದಡುವ ಪ್ರಯತ್ನ ನಡೆಸಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್‌ ನಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ನಿರ್ಧಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement