ಉತ್ತರ ಕನ್ನಡಕ್ಕೆ ಬೇಕು ಸುಪರ್‌ಸ್ಪೆಶಾಲಿಟಿ ಆಸ್ಪತ್ರೆ : ನಾಳೆ ಬೆಂಗಳೂರಲ್ಲಿ ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆಯ ನಾಗರಿಕರ ವೇದಿಕೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜುಲೈ 30ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಎಲ್ಲರೂ ಸೇರಿ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಿದ್ದಾರೆ.

ಇದೊಂದು ರಾಜಕೀಯೇತರ ಅಭಿಯಾನವಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಲೇಬೇಕು, ಆರೋಗ್ಯ ಸಂಬಂಧಿ ಸಮಸ್ಯೆಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗುವಾಗ ಜನರು ದಾರಿ ಮಧ್ಯೆ ಸಾಯುವುದನ್ನು ತಪ್ಪಿಸಬೇಕು ಎಂದು ಅಲ್ಲಿನ ಜ್ವಲಂತ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವ ಮೂಲಕ ಜಿಲ್ಲೆಯಲ್ಲಿ ಸುಸಜ್ಜಿತ ಆರೋಗ್ಯ ಸೌಲಭ್ಯ ಜನರಿಗೆ ಸಿಗಬೇಕು ಎಂಬುದು ಇದರ ಹಿಂದಿನ ಉದ್ದೇಶವಾಗಿದೆ.

ಉತ್ತರ ಕನ್ನಡ ಜಿಲ್ಲೆ ಜನ ಈಗಾಗಲೇ ವಿವಿಧ ಯೋಜನೆಗಳಿಗಾಗಿ ಅಪಾರ ತ್ಯಾಗ ಮಾಡಿದ್ದರಿಂದ ರಾಜ್ಯ ಹಾಗೂ ರಾಷ್ಟ್ರಕ್ಕೆ ಯೋಜನೆಗಳ ಲಾಭ ತಲುಪುತ್ತಿದೆ. ಆದರೆ ಇಷ್ಟೊಂದು ತ್ಯಾಗ ಮಾಡಿದ ಜಿಲ್ಲೆಯ ಜನ ಸುಸಜ್ಜಿತ ಆರೋಗ್ಯ ಸೌಲಭ್ಯಗಳಿಂದ ವಂಚಿತವಾಗಿದ್ದಾರೆ. ಹೀಗಾಗಿ ಸರ್ಕಾರ ಜಿಲ್ಲೆಯ ಜನರ ಅಗತ್ಯ ಮನಗಂಡು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲೆಯ ನಾಗರಿಕರ ವೇದಿಕೆ ಒತ್ತಾಯಿಸಿದೆ. ಈ ನಿಟ್ಟಿನಲ್ಲಿ ಜುಲೈ 30, ಶನಿವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುವ ಹಕ್ಕೊತ್ತಾಯದ WeNeedSuperSpecialityHospitalInUttaraKannada” ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಗಟ್ಟಿ ಧವನಿಯಾಗಬೇಕು ಎಂದು ಮನವಿ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಉತ್ತರ ಕನ್ನಡಕ್ಕೆ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬೇಕು ಎಂಬ ಜನರ ಹೋರಾಟಕ್ಕೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಶಿರಸಿ ಸೋಂದಾದ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಹೊನ್ನಾವರ ಕರ್ಕಿ ವೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರುಗಳು ಬೆಂಬಲ ಸೂಚಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement