ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಹೊಣೆ ಎನ್​ಐಎಗೆ ವರ್ಗವಾವಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ.
ಈ ಪ್ರಕರಣವು ಅಂತಾರಾಜ್ಯ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲು ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ. ಹಿರಿಯ ಪೊಲೀಸ್​ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಪ್ರವೀಣ್​ ಹತ್ಯೆ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸುರತ್ಕಲ್​ನಲ್ಲಿ ನಡೆದ ಮತ್ತೊಬ್ಬ ಯುವಕನ ಹತ್ಯೆ ಬಗ್ಗೆಯೂಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ಈ ಪ್ರಕರಣದ ತನಿಖೆಯೂ ಚುರುಕಾಗಿದೆ ಎಂದು ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಗಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯ ಮೀಸಲು ಪಡೆಯ (KSRP) ಬೆಟಾಲಿಯನ್​​ ನಿಯೋಜಿಸಲಾಗುತ್ತದೆ. ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಫಾಜಿಲ್​ ಕೊಲೆ ಪ್ರಕರಣದ ತನಿಖೆಗೂ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಎಲ್ಲ ಸಮುದಾಯದ ಮುಖಂಡರ ಜತೆ ಶಾಂತಿ ಸಭೆ ನಡೆಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡುತ್ತೇವೆ ಎಂದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬೇರೆ ರಾಜ್ಯದವರು ಪಾಲ್ಗೊಂಡಿರುವ ಶಂಕೆಯಿದೆ. ಅಗತ್ಯ ಮಾಹಿತಿ ಕಲೆಹಾಕಿದ ಮೇಲೆ ಕೇರಳ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ ಎಂದು ತಿಳಿಸಿದರು.
ಪ್ರಕರಣ ಎನ್‌ಐಎಗೆ ಹಸ್ತಾಂತರವಾದ ನಂತರ ಪ್ರವೀಣ ಹತ್ಯೆ ಸಂಬಂಧ ಈಗಾಗಲೇ ರಾಜ್ಯ ಪೊಲೀಸರು ಬಂಧಿಸಿರುವ ಅಥವಾ ವಶಕ್ಕೆ ಪಡೆದಿರುವ ವ್ಯಕ್ತಿಗಳನ್ನೂ ಮುಂದಿನ ದಿನಗಳಲ್ಲಿ ಎನ್​ಐಎ ಸಿಬ್ಬಂದಿ ತಮ್ಮ ವಶಕ್ಕೆ ಪಡೆಯಲಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement