ಕರಾವಳಿ ಭಾಗದಲ್ಲಿ ವಿಶೇಷ ಕ್ರಮ ಜಾರಿ ಮಾಡ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು:ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಲ್ಲಿನ ಎಡಿಜಿಪಿಎ ಸೂಚನೆ ನೀಡಿದ್ದೇನೆ. ಪ್ರತಿಯೊಂದು ಕೊಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಲ್ಲಿ ಡಿಜಿ, ಐಜಿಪಿ ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್.ಟಿ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ವಿಶೇಷ ಕಠಿಣ ಕ್ರಮ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇನೆ. ಕರಾವಳಿ ಕರ್ನಾಟಕ ಭಾಗದಲ್ಲಿ ನಿರ್ಬಂಧ ಹೇರುವ ಬಗ್ಗೆ ಚರ್ಚೆ ನಡೆಸುತ್ತೇನೆ. ಕರ್ನಾಟಕದಿಂದ ಕೇರಳ ಗಡಿಗೆ ಓಡಾಡುವ 58 ರಸ್ತೆಗಳಿದೆ. ಈ ವಿಚಾರವಾಗಿ ಉನ್ನತ ಮಟ್ಟದಲ್ಲಿ ಸಭೆ ನಡೆಸುತ್ತೇನೆ

ಸುರತ್ಕಲ್ ನಲ್ಲಿ ಕೊಲೆ ಆಗಿದೆ ಎಂಬ ಮಾಹಿತಿ ಬಂದಿದೆ. ಎಡಿಜಿಪಿ ಲಾ ಆಂಡ್ ಆರ್ಡರ್ ಅವರಿಗೆ ಅಲ್ಲಿಯೇ ಇರಲು ಹೇಳಿದ್ದೇನೆ. ನಿನ್ನೆ ನಾನು ಪ್ರವೀಣ್ ಮನೆಗೆ ಹೋಗಿ ವಾಪಸ್ ಬರುವಾಗ ಮತ್ತೊಂದು ಕೊಲೆ ಆಗಿದೆ. ಅಲ್ಲಿನ ಜನರ ಬದುಕು ನಮಗೆ ಅಷ್ಟೇ ಪ್ರಮುಖ ಎಂದರು. ಫಾಜಿಲ್​ ಹತ್ಯೆ  ಪೂರ್ವನಿಯೋಜಿತ ಕೃತ್ದಂತೆ ಕಂಡುಬರುತ್ತದೆ.   ಅಧಿಕಾರಿಗಳಿಂದ ನಾನು ಮಾಹಿತಿಯನ್ನು ಪಡೆಯುತ್ತೇನೆ. ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ನಾವು ತನಿಖೆಯಲ್ಲಿ ಹಿಂದೆ ಬಿದ್ದಿಲ್ಲ ಎಂದ ಅವರು, ನಾನು ಫಾಜಿಲ್ ಹತ್ಯೆಯನ್ನು ಕೇವಲ ಕೊಲೆ ಎಂದು ನೋಡುತ್ತಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement