ಮುಂಬೈ : ವಿಂಡೀಸ್ ಪ್ರವಾಸದಿಂದ ಮರಳಿದ ಬಳಿಕ, ಭಾರತ ಕ್ರಿಕೆಟ್ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಹರಾರೆಯಲ್ಲಿ ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ.
ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ನಾಯಕ ಶಿಖರ್ ಧವನ್‌ಗೆ ಮತ್ತೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಜಿಂಬಾಬ್ವೆಯಲ್ಲಿಯೂ 3 ಏಕದಿನ ಪಂದ್ಯಗಳನ್ನು ಧವನ್ ಮುನ್ನಡೆಸಲಿದ್ದಾರೆ. ಈ ಸರಣಿಗೂ ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಯುಎಇಯಲ್ಲಿ ನಡೆಯಲಿರುವ ಏಷ್ಯಾ ಕಪ್ ಪ್ರಾರಂಭವಾಗುವುದಕ್ಕಿಂತ ಐದು ದಿನಗಳಿಗೆ ಮುಂಚೆ ಜಿಂಬಾಬ್ವೆ ಪ್ರವಾಸ ಕೊನೆಗೊಳ್ಳುತ್ತದೆ. ಭಾರತ ತಂಡದ ನಾಯಕ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರಿಗೂ ವಿಶ್ರಾಂತಿ ನೀಡಲಾಗಿದೆ.
ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದ ವಾಷಿಂಗ್ಟನ್ ಸುಂದರ್ ಅವರು ತಂಡಕ್ಕೆ ವಾಪಸ್ಸಾಗಿದ್ದಾರೆ. ತಂಡದಿಂದ ಹೊರಗುಳಿದಿದ್ದ ದೀಪಕ್ ಚಹಾರ್ ಕೂಡಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಹುಲ್ ತ್ರಿಪಾಠಿಗೆ ತಂಡದಲ್ಲಿ ಮಣೆ ಹಾಕಲಾಗಿದೆ.
ಭಾರತವು ಆಗಸ್ಟ್ 18ರಿಂದ ಆಗಸ್ಟ್ 22ರ ವರೆಗೆ ಜಿಂಬಾಬ್ವೆ ವಿರುದ್ಧ ಒಟ್ಟು 3 ಏಕದಿನ ಪಂದ್ಯಗಳನ್ನು ಆಡಲಿದೆ. ಆಗಸ್ಟ್ 18, 20 ಮತ್ತು 22ರಂದು ಪಂದ್ಯ ನಡೆಯಲಿದೆ.
ಭಾರತದ ತಂಡ : ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ