ಎಸ್​ಡಿಪಿಐ, ಪಿಎಫ್​ಐ ನಿಷೇಧಕ್ಕೆ ಒತ್ತಾಯಿಸಿ ಗೃಹ ಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಮುತ್ತಿಗೆ; ಲಘು ಲಾಠಿ ಪ್ರಹಾರ

ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಇಂದು ಶುಕ್ರವಾರ ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದರು.
ಜಯಮಹಲ್​ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ ಹಾಗೂ ಎಬಿವಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ಬಳಿಕ ರಾಜ್ಯ ಬಿಜೆಪಿ ಸರ್ಕಾರ ತಮ್ಮದೇ ಕಾರ್ಯಕರ್ತರ ಪ್ರತಿಭಟನೆಗಳನ್ನು ಎದುರಿಸುತ್ತಿದೆ. ಈಗ ಅದರ ಬಿಸಿ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ತಟ್ಟಿದೆ. ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮನೆಯೊಳಗೆ ನುಗ್ಗಲು ಕಾರ್ಯಕರ್ತರ ಯತ್ನ
ಕೊಲೆ ಪ್ರಕರಣಗಳ ನಿಗ್ರಹಕ್ಕೆ ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸಿ ಮತ್ತು ಎಸ್​ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸದ ಗೇಟ್ ತಳ್ಳಿ ಒಳನುಗ್ಗಿದ ಕಾರ್ಯಕರ್ತರು, ಮನೆ ಬಾಗಿಲು ತೆರೆದು ಒಳನುಗ್ಗಲು ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ಹತೋಟಿಗೆ ತರಲು ಹರಸಾಹಸಪಟ್ಟಿದ್ದಾರೆ. ಗೃಹ ಸಚಿವರ ಸರ್ಕಾರಿ ನಿವಾಸದ ಬಾಗಿಲಿನ ಮುಂದೆ ಪ್ರತಿಭಟನೆ ಕುಳಿತ ಕಾರ್ಯಕರ್ತರು, ಪೊಲೀಸರ ಜೊತೆ ವಾಗ್ವಾದ ನಡೆಸಿದ್ದು, ನಿವಾಸದ ಒಳಗೆ ಕಾರ್ಯಕರ್ತರು ನುಗ್ಗದಂತೆ ಪೊಲೀಸರು ಬಾಗಿಲಿಗೆ ಅಡ್ಡಲಾಗಿ ನಿಂತಿದ್ದರು. ಕೆಲವು ಕಾರ್ಯಕರ್ತರ ಮೇಲೆ ಲಘ ಲಾಠಿ ಪ್ರಹಾರ ನಡೆದಿದೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಗೃಹ ಸಚಿವರ ಸರ್ಕಾರಿ ಮನೆ ಬಳಿ ಎಬಿವಿಪಿ ಪ್ರತಿಭಟನೆ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ ಪಾಟೀಲ, ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳನ್ನು ಗೃಹ ಸಚಿವರ ನಿವಾಸದ ಒಳಗೆ ಕರೆಸಿಕೊಂಡು ಸಂದೀಪ್ ಪಾಟೀಲ್ ಅವರು ತರಾಟೆಗೆ ತೆಗೆದುಕೊಂಡರು.
40 ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರುಗೃಹ ಸಚಿವರ ಸರ್ಕಾರಿ ಮನೆ ಬಳಿ ಪ್ರತಿಭಟನೆ ನಡೆಸಿದ 40 ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ಈಗ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement