ಕರಾವಳಿ ಘಟನೆ ನೋವು ತಂದಿದೆ, ಇಸ್ರೇಲ್ ನಲ್ಲಿ ಬೆಳಗ್ಗೆ ಇಂಥ ಘಟನೆಯಾದರೆ ಸಂಜೆಗೇ ಗಲ್ಲಿಗೆ ಹಾಕ್ತಾರೆ: ಹೊರಟ್ಟಿ

ಹಾವೇರಿ: ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆಯಾದರೆ ಮಾತ್ರ ಇಂತಹ ಘಟನೆಗಳು ಕಡಿಮೆಯಾಗುತ್ತವೆ. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಹಾವೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯಬಾರದು. ಇಂತಹ ಸಮಯದಲ್ಲಿ ಇಂಟೆಲಿಜೆನ್ಸಿಯವರು ಪೊಲೀಸರಿಗಿಂತ ಹೆಚ್ಚಿನ ಕೆಲಸ ಮಾಡಿ ಸರ್ಕಾರಕ್ಕೆ ಮಾಹಿತಿ ಕೊಡಬೇಕು. ಯಾವುದೇ ಜಾತಿ ಇರಲಿ, ಯಾರೇ ಇರಲಿ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಬೇಕು. ಅದನ್ನು ಮಾಧ್ಯಮದವರ ಮೂಲಕ ಜನರಿಗೆ ಗೊತ್ತು ಮಾಡಬೇಕು. ಹಾಗಾದಾಗ ಇಂತಹ ಘಟನೆಗಳು ನಡೆಯುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯಲ್ಲಿದ್ದವರನ್ನು ಕೊಲೆ ಮಾಡುವುದು ಸರಿಯಲ್ಲ. ಇದು ಬಹಳ ನೋವಿನ ಸಂಗತಿ. ಕೋಳಿ, ಕುರಿಯಂತೆ ಮನುಷ್ಯರ ಜೀವನ ತೆಗೆಯುತ್ತಿದ್ದಾರೆ. ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು. ಹೈದರಾಬಾದ್‌ನಲ್ಲಿ ಸಜ್ಜನ ಶೂಟೌಟ್ ಮಾಡಲಿಲ್ಲವೇ? ಇಂತಹ ಸಮಯದಲ್ಲಿ ಪೊಲೀಸರು ಸಣ್ಣ ತಪ್ಪು ಮಾಡಿದರೆ, ಇಂತಹ ಘಟನೆಗಳು ಆಗುವುದು ನಿಂತರೆ ನಾನೇನು ಅದನ್ನು ತಪ್ಪು ಎನ್ನುವುದಿಲ್ಲ. ಮುಂದೇನಾಗುತ್ತದೆಯೋ ನೋಡೋಣ ಎಂದು ಹೊರಟ್ಟಿ ಹೇಳಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಮ್ಮಲ್ಲಿ ಬಹಳಷ್ಟು ಬಹಳಷ್ಟು ಕಾನೂನುಗಳಿವೆ. 10-15 ವರ್ಷ ಆಗುವುದರಲ್ಲಿ ಜನರು ಆ ಘಟನೆ ಮರೆತು ಬಿಡುತ್ತಾರೆ. ನಾನು ಇಸ್ರೇಲ್‌ಗೆ ಹೋಗಿದ್ದೆ. ಅಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ ಸಂಜೆ ಗಲ್ಲಿಗೆ ಹಾಕುತ್ತಾರೆ ಎಂದು ಹೊರಟ್ಟಿ ಹೇಳಿದರು.
ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಕಟ್ಟುನಿಟ್ಟಾದ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಮತ್ತಷ್ಟು ನಡೆಯುತ್ತವೆ. ಇಂತಹ ಸಮಯದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಶಾಂತಿ ಕಾಪಾಡಬೇಕು. ಒಬ್ಬರಿಗೊಬ್ಬರು ಕೆಸರೆರೆಚುವ ಪರಿಸ್ಥಿತಿ ಆಗಬಾರದು. ಮುಖ್ಯಮಂತ್ರಿಗಳು ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಯೋಗಿ ಮಾದರಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಹೊರಟ್ಟಿ, ಅದೆಲ್ಲ ನನಗೆ ಗೊತ್ತಿಲ್ಲ. ತಪ್ಪು ಮಾಡಿದವರಿಗೆ ಇಂಥ ಶಿಕ್ಷೆ ಆಯಿತು ಎಂಬುದು ಎಲ್ಲ ರಿಗೂ ಗೊತ್ತಾಗಬೇಕು ಎಂದರು.
ಯೋಗಿ ಮಾದರಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಹೊರಟ್ಟಿ, ನಾನು ಯೋಗಿಯಂತಹ ಮತ್ತೊಬ್ಬರನ್ನು ನೋಡಿಲ್ಲ. ಅದೆಲ್ಲ ನನಗೆ ಗೊತ್ತಿಲ್ಲ. ತಪ್ಪು ಮಾಡಿದವರಿಗೆ ಇಂಥ ಶಿಕ್ಷೆ ಆಯಿತು ಎಂಬುದು ಎಲ್ಲ ರಿಗೂ ಗೊತ್ತಾಗಬೇಕು, ಆಗಲೇ ಇಂತಹ ಘಟನೆಗಳು ಕಡಿಮೆಯಾಗುತ್ತದೆ ಎಂದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement