ಪರಿಷತ್ ಉಪ ಚುನಾವಣೆ: ಬಾಬೂರಾವ್ ಚಿಂಚನಸೂರಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ಒಂದು ಸ್ಥಾನಕ್ಕೆ ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಹೆಸರು ಘೋಷಣೆ ಮಾಡಿದೆ.
ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರಿಗೆ ಟಿಕೆಟ್ ನೀಡಿದೆ.ವಿಧಾನ ಪರಿಷತ್‌ ಸದಸ್ಯರಾಗಿದ್ದ ಸಿ.ಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಿದ ನಂತರ ಒಂದು ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ ಈಗ ಉಪ ಚುನಾವಣೆ ಘೋಷಣೆಯಾಗಿದೆ. ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಮಾರ್ಚ್ 31ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಸ್ಥಾನಕ್ಕೆ ಚುನಾವಣೆ ನಡೆಯುವ ಕುರಿತು ಜುಲೈ 25ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಆಗಸ್ಟ್‌ 11ರಂದು ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಆಗಸ್ಟ್‌ 1ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ದಿನ ಆಗಸ್ಟ್‌ 2ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಆಗಸ್ಟ್‌ 4 ಕೊನೆಯ ದಿನ. ಈ ಸ್ಥಾನಕ್ಕೆ ಕೋಲಿ ಸಮುದಾಯದ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬಾಬೂರಾವ್ ಚಿಂಚನಸೂರಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ನಲ್ಲಿದ್ದ ಬಾಬುರಾವ್‌ ಚಿಂಸನಸೂರ 2018ರಲ್ಲಿ ಬಿಜೆಪಿ ಸೇರಿದ್ದರು.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement