ಬೆಂಗಳೂರಿನಲ್ಲಿ ಇಥಿಯೋಪಿಯದಿಂದ ಬಂದ ವ್ಯಕ್ತಿಯಲ್ಲಿ ಶಂಕಿತ ಮಂಕಿಪಾಕ್ಸ್‌ ಪತ್ತೆ

ಬೆಂಗಳೂರು: ಶಂಕಿತ ಮಂಕಿಪಾಕ್ಸ್ ಪ್ರಕರಣ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮಂಕಿಪಾಕ್ಸ್ ಗುಣಲಕ್ಷಣಗಳಿರುವ ವಿದೇಶಿ ಪ್ರಜೆಯನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿದೆ.
ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳು ಪತ್ತೆಯಾಗಿರುವುದರಿಂದ ಶಂಕಿತ ರೋಗಿಯನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಜುಲೈ 4ರಂದು ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿದ್ದ ಈ ವ್ಯಕ್ತಿಗೆ ಗುಣಲಕ್ಷಣಗಳು ಕಂಡು ಬಂದಿದೆ. ಕಿಡ್ನಿಕಸಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದ ಆಫ್ರಿಕಾ ಮೂಲದ ವ್ಯಕ್ತಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿತ್ತು. ಶಂಕಿತನ ಸ್ಯಾಂಪಲ್ ಅನ್ನು ಪುಣೆಯ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಶಂಕಿತ ವ್ಯಕ್ತಿಗೆ ಮೊನ್ನೆ ರಾತ್ರಿ ವ್ಯಕ್ತಿಯ ಎಡಗೈಯಲ್ಲಿ ತುರಿಕೆ ಕಾಣಿಸಿಕೊಂಡಿದೆ. ಕ್ರಮೇಣ ತುರಿಕೆ ಇಡೀ ದೇಹಕ್ಕೆ ವ್ಯಾಪಿಸಿದೆ. ಎಡಗಾಲಿನ ತೊಡೆಯ ಭಾಗದಲ್ಲಿ ಗುಳ್ಳೆಗಳು ಕಾಣಿಸಿ ಕೊಂಡಿರುವುದರಿಂದ ಆತನಿಗೆ ಮಂಕಿಪಾಕ್ಸ್ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಶಂಕಿತ ವ್ಯಕ್ತಿಯ ಜೊತೆ ಬಂದಿದ್ದ ಆತನ ಸಹೋದರ ಹಾಗೂ ಸಹೋದರಿ ಮೇಲೂ ತೀವ್ರ ನಿಗಾ ಇಡಲಾಗಿದೆ. ಒಂದು ವೇಳೆ ಆಫ್ರಿಕಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಇರುವುದು ಖಚಿತಪಟ್ಟರೆ ನಗರದಲ್ಲೂ ತೀವ್ರ ಮುನ್ನೆಚ್ಚರಿಕೆ ವಹಿಸಬೇಕಿದೆ.
ಕೆಲ ದಿನಗಳ ಹಿಂದೆ ಬ್ರಿಟನ್‌ಗೆ ಹೋಗಿ ವಾಪಸ್ಸಾಗಿದ್ದ ಬೆಂಗಳೂರು ಮೂಲದ ವ್ಯಕ್ತಿಗೂ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡು ಬಂದಿತ್ತು. ಕೂಡಲೇ ಆತನ ಸ್ಯಾಂಪಲ್ ಅನ್ನು ಪುಣೆಯ ಎನ್‍ ಐವಿ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಆದರೆ, ಆತನ ವರದಿ ನೆಗೆಟಿವ್ ಬಂದಿದ್ದರಿಂದ ಆತಂಕ ದೂರವಾಗಿತ್ತು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement