ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ, ಒಂದು ವೇಳೆ…”: ವಿವಾದ ಸೃಷ್ಟಿಸಿದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್​ ಕೋಶಿಯಾರಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದ್ದು ೀಗ ಹೇಳಿಕೆಗೆ ಟೀಕೆಗಳು ವ್ಯಕ್ತವಾಗಿವೆ.
ಗುಜರಾತಿ ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ ಅದರಲ್ಲೂ ಮುಂಬೈ ಮತ್ತು ಥಾಣೆಯಿಂದ ಹೊರಹಾಕಿದರೆ, ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ ಎಂದು ನಿನ್ನೆ (ಜುಲೈ 29) ಕಾರ್ಯಕ್ರಮವೊಂದರಲ್ಲಿ ಭಾಷಣದ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಕೋಶಿಯಾರಿ ಹೇಳಿರುವುದಕ್ಕೆ ಈ ಟೀಕೆಗಳು ವ್ಯಕ್ತವಾಗಿವೆ.
ಅವರು ಮಹಾರಾಷ್ಟ್ರದಿಂದ ಹೊರಹೋದರೆ ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯಲು ಸಾಧ್ಯವಿಲ್ಲ ಎಂದು ನಿನ್ನೆ ಮುಂಬೈನ ಪಶ್ಚಿಮ ಉಪನಗರ ಅಂಧೇರಿಯ ಚೌಕ್​ನಲ್ಲಿ ನಡೆದ ನಾಮಕರಣ ಸಮಾರಂಭದಲ್ಲಿ ಅವರು ಹೇಳಿದರು.

ಶಿವಸೇನೆ ಮತ್ತು ಕಾಂಗ್ರೆಸ್‌ನ ಹಲವಾರು ನಾಯಕರು ಕೋಶಿಯಾರಿ ಅವರನ್ನು ಟೀಕಿಸಿದ್ದಾರೆ ಮತ್ತು ಹಾಗೂ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಕಷ್ಟಪಟ್ಟು ದುಡಿಯುವ ಮರಾಠಿಗರನ್ನು ರಾಜ್ಯಪಾಲರು ಅವಮಾನಿಸಿದ್ದಾರೆ ಎಂಬ ಹೇಳಿರುವ ಶಿವಸೇನಾ ಸಂಸದ ಸಂಜಯ್ ರಾವತ್‌ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ. ಬಿಜೆಪಿ ಪ್ರಾಯೋಜಿತ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಕೂಡಲೇ ಮರಾಠಿಗರಿಗೆ ಅವಮಾನವಾಗುತ್ತಿದೆ” ಎಂದು ರಾವತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಸಚಿನ್ ಸಾವಂತ್ ಕೂಡ ಈ ವೀಡಿಯೋವನ್ನು ಟ್ವೀಟ್ ಮಾಡಿ ರಾಜ್ಯಪಾಲರು ಈ ಹೇಳಿಕೆ ನೀಡಬಾರದಿತ್ತು ಎಂದು ಹೇಳಿದ್ದಾರೆ.
ನಂತರ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಾರಾಷ್ಟ್ರ ರಾಜಭವನ, ಮುಂಬೈಯನ್ನು ದೇಶದ ಆರ್ಥಿಕ ರಾಜಧಾನಿಯನ್ನಾಗಿ ಮಾಡುವಲ್ಲಿ ರಾಜಸ್ಥಾನದ ಮಾರ್ವಾಡಿ ಮತ್ತು ಗುಜರಾತಿ ಸಮುದಾಯಗಳ ಕೊಡುಗೆಯನ್ನು ಕೊಶ್ಯಾರಿ ಶ್ಲಾಘಿಸಿದ್ದಾರೆ ಎಂದಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement