ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್​ 2ರ ವರೆಗೆ ವ್ಯಾಪಕ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ಕರ್ನಾಟಕದಲ್ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.ಇಂದಿನಿಂದ ನಾಲ್ಕು ದಿನ ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ (Orange Alert) ನೀಡಲಾಗಿದೆ.
ಇಂದಿನಿಂದ ಆಗಸ್ಟ್​ 2ರ ವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯಲ್ಲಿ 5 ದಿನ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ಬಳ್ಳಾರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೂ ಹಳದಿ ಅಲರ್ಟ್ ನೀಡಲಾಗಿದೆ.
ಕಲಬುರ್ಗಿ, ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement