ಐಸಿಸ್ ಉಗ್ರರ ಜೊತೆ ಸಂಪರ್ಕ : ಕರ್ನಾಟಕದಲ್ಲೂ ಎನ್‌ಐಎ ದಾಳಿ, ಭಟ್ಕಳದಲ್ಲಿ ಇಬ್ಬರು, ತುಮಕೂರಿನಲ್ಲಿ ಓರ್ವ ವಶಕ್ಕೆ

ಕಾರವಾರ/ನವದೆಹಲಿ: ಐಎಸ್‍ಐಎಸ್ ನಂಟು ಹೊಂದಿರುವ ಶಂಕೆ ಮೇಲೆ ಎನ್ಐಎ ತಂಡವು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದೆ. ಹಾಗೂ ತುಮಕೂರಿನಲ್ಲಿ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.
ಭಟ್ಕಳದಲ್ಲಿ ಬೆಳ್ಳಂಬೆಳಗ್ಗೆ 4 ಗಂಟೆಗೆ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಎನ್ಐಎ ದಾಳಿ ನಡೆಸಿದೆ. ಐಸಿಸ್​ ಉಗ್ರ ಸಂಘಟನೆ ಜತೆ ನಂಟಿನ ಶಂಕೆ ಹಿನ್ನೆಲೆ ತುಮಕೂರಿನ‌ ಮನೆ ಮೇಲೆ ಭಾನುವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಅಬ್ದುಲ್ ಮಸ್ತಿರ್‌ (30) ಎಂಬಾತನನ್ನು ಎನ್ಐಎ ತಂಡ ಇಂದು ವಶಕ್ಕೆ ಪಡೆದಿದೆ. ಐಎಸ್‍ಐಎಸ್ ಬರಹಗಳನ್ನು ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಕಾರಣಕ್ಕಾಗಿ ಭಟ್ಕಳ ನಗರದ ಅರ್ಬನ್ ಬ್ಯಾಂಕ್ ಬಳಿ ಇರುವ ಮನೆಯಿಂದ ಆತನನ್ನು ಎನ್‍ಐಎ ತಂಡ ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ. ಮತ್ತೊಬ್ಬನನ್ನೂ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿಯಂತೆ ವಶಕ್ಕೆ ಪಡೆದವರಲ್ಲಿ ಒಬ್ಬ ಭಟ್ಕಳ ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಐಎಸ್‍ಐಎಸ್‍ನ ಬರಹಗಳನ್ನು ಭಾರತೀಯ ಭಾಷೆಗಳಿಗೆ ಈತ ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಎಂಬ ಆರೋಪದಡಿ ಈತನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಕರ್ನಾಟಕ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ ಈ ದಾಳಿ ನಡೆದಿದ್ದು, ರಾಜ್ಯದ ಭಟ್ಕಳ ಹಾಗೂ ತುಮಕೂರಿನಲ್ಲೂ ಎನ್‌ಐಎ ಮಿಂಚಿನ ಕಾರ್ಯಾಚರಣೆ ನಡೆಸಿದೆ.
ಐಸಿಸ್ ಸಂಪರ್ಕದ ಆರೋಪದ ಮೇರೆಗೆ 2021ರಲ್ಲಿ ಭಟ್ಕಳದಲ್ಲಿ ಓರ್ವನನ್ನ ಬಂಧಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಮುಂದುವರೆಸಿದ್ದ ಎನ್‌ಐಎ, ಭಾನುವಾರ ಜುಲೈ 31 ರಂದು ಮಧ್ಯ ಪ್ರದೇಶದ ಎರಡು ಕಡೆ, ಗುಜರಾತ್ ರಾಜ್ಯದ ನಾಲ್ಕು ಕಡೆ, ಮಹಾರಾಷ್ಟ್ರ, ಕರ್ನಾಟಕದಲ್ಲಿ ತಲಾ ಎರಡು ಕಡೆ ಹಾಗೂ ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ದಾಳಿ ನಡೆಸಿದೆ.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement