ರಾಜ್ಯದ 95 ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ 95 ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಾಜ್ಯದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆ ಪರಿಶೀಲಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆರ್ಥಿಕ ಇಲಾಖೆಯ ಅನುಮತಿ ಪಡೆದು ಈಗಾಗಲೇ ಐದು ಶಾಲೆಗಳ ಉನ್ನತೀಕರಣಕ್ಕೆ ಆದೇಶಿಸಿತ್ತು. ಈಗ ಉಳಿದ 95 ಶಾಲೆಗಳ ಉನ್ನತೀಕರಣಕ್ಕೆ ಮಂಜೂರಾತಿ ನೀಡಲಾಗಿದೆ.
ಹಾವೇರಿ, ಯಾದಗಿರಿ ಜಿಲ್ಲೆಗಳ ತಲಾ 16 ಶಾಲೆಗಳು, ಬಳ್ಳಾರಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ತಲಾ 11 ಶಾಲೆಗಳು, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ತಲಾ 6, ಕಲಬುರಗಿ-4, ವಿಜಯಪುರ-5, ಗದಗ ಮತ್ತು ಬಾಗಲಕೋಟೆ ಜಿಲ್ಲೆಯ ತಲಾ 2- ಧಾರವಾಡ-3, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ದಕ್ಷಿಣ, ಶಿರಸಿ ಶೈಕ್ಷಣಿಕ ಜಿಲ್ಲೆಗಳ ತಲಾ ಒಂದು ಶಾಲೆಯನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಅಡಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತ ಔಷಧಿ ವಿತರಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement