ಗೃಹ ಸಚಿವ ಆರಗ ಮನೆಗೆ ಎಬಿವಿಪಿ ಮುತ್ತಿಗೆ: ಪಿಎಸ್‌ಐ, ಹೆಡ್ ಕಾನ್‌ಸ್ಟೆಬಲ್ ಸಸ್ಪೆಂಡ್‌

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಸಿ.ನಗರ ಠಾಣೆ ಪಿಎಸ್‌ಐ ರಾಜೇಸಾಬ್ ಹಾಗೂ ಹೆಡ್ ಕಾನ್‌ಸ್ಟೆಬಲ್ ಶ್ರೀನಿವಾಸ್ ಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಜಯಮಹಲ್ ಬಳಿಯ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಿದ್ದರು. ತ್ವರಿತ ಕ್ರಮ ಕೈಗೊಳ್ಳಬೇಕಾದ ಪಿಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಕರ್ತವ್ಯಲೋಪ ಕಂಡುಬಂದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ ಅವರು ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ನಂತರ ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜೆ.ಸಿ.ನಗರ ಠಾಣೆ ಇನ್‌ಸ್ಪೆಕ್ಟರ್‌ ವರ್ಗಾವಣೆ ಆಗಿದ್ದು, ಸದ್ಯ ಈ ಹುದ್ದೆ ಖಾಲಿ ಇದೆ. ಪಿಎಸ್‌ಐ ರಾಜೇಸಾಬ್ ಅವರಿಗೆ ಪ್ರಭಾರಿ ಠಾಣಾಧಿಕಾರಿಯಾಗಿ ಜವಾಬ್ದಾರಿ ನೀಡಲಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement