ಫಾಜಿಲ್ ಹತ್ಯೆಗೆ ಬಳಸಿದ ಕಾರು ಪಡುಬಿದ್ರೆಯ ನಿರ್ಜನ ಪ್ರದೇಶದಲ್ಲಿ ಪತ್ತೆ

ಉಡುಪಿ: ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆ ಸಮೀಪದ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ.
ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೋಲಿಸರು ಸ್ಥಳಕ್ಕೆ ತೆರಳಿ ಕಾರನ್ನು ಪರಿಶೀಲಿಸಿದ್ದಾರೆ. ನಂತರ ಇದು ಫಾಜಿಲ್ ಹತ್ಯೆಗೆ ಬಳಸಿದ ಕಾರು ಎಂಬುದು ತಿಳಿದಿದೆ. ಆರೋಪಿಗಳು ಕಾರನ್ನು ಸುರತ್ಕಲ್‌ನಿಂದ ಪಡುಬಿದ್ರೆಯ ಇನ್ನಾದ ವರೆಗೆ ತಂದು ನಂತರ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಊಹಿಸಲಾಗಿದೆ.

ಬೆರಳಚ್ಚು ತಜ್ಞರು ಬರುವ ವರೆಗೆ ಸಾರ್ವಜನಿಕರು ಸ್ಪರ್ಶಿಸಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ಯಾರೂ ಅಷ್ಟಾಗಿ ಗಮನಿಸಿರಸಿಲ್ಲ. ಾದರೆ, ಇಂದು ಭಾನುವಾರ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ದ್ದಾರೆ. ಪೊಲೀಸರು ಬಂದ ನಂತರವೇ ಇದು ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಸುರತ್ಕಲ್‌ನಲ್ಲಿ ಜುಲೈ 28ರಂದು ರಾತ್ರಿ 7:30ರ ಸುಮಾರಿಗೆ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಹಮ್ಮದ್‌ ಫಾಜಿಲ್‌ ಅವರನ್ನು ತಲವಾರಿನಿಂದ ಕಡಿದು ಪರಾರಿಯಾಗಿದ್ದರು. ಫಾಝಿಲ್‌ ನಂತರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement