ಮಣಿಪಾಲ ಪೈ ಕುಟುಂಬದ ಹಿರಿಯ ಚೇತನ, ಉದಯವಾಣಿ ಸಂಸ್ಥಾಪಕ ಟಿ. ಮೋಹನದಾಸ್ ಪೈ ಇನ್ನಿಲ್ಲ

ಉಡುಪಿ: ಮಣಿಪಾಲದ ಪೈ ಕುಟುಂಬದ ಹಿರಿಯರು, ‘ಉದಯವಾಣಿ’ ಸಂಸ್ಥಾಪಕರಾಗಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ, ಜುಲೈ31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ.
ಮಣಿಪಾಲದ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಎಂಜಿಎಂ ಕಾಲೇಜಿನ ಟ್ರಸ್ಟ್‌, ಉದಯವಾಣಿ ದಿನ ಪತ್ರಿಕೆ, ತರಂಗ ವಾರ ಪತ್ರಿಕೆ ಹಾಗೂ ಪ್ರಕಟವಾಗುವ ಮಣಿಪಾಲ್ ಮೀಡಿಯ ನೆಟ್‌ವರ್ಕ್‌ನ ಸಂಸ್ಥೆಗಳ ಅಧ್ಯಕ್ಷರಾಗಿ ಸಂಸ್ಥೆಗಳ ಬೆಳವಣಿಗೆಗೆ ಕಾರಣರಾಗಿದ್ದರು,

1933ರ ಜೂನ್‌ 20ರಂದು ಜನಿಸಿದ ಮೋಹನದಾಸ್ ಪೈ ಅವರು ಡಾ.ಟಿಎಂಎ ಪೈ ಅವರ ಹಿರಿಯ ಪುತ್ರ. ಇವರು ಕೊಲ್ಹಾಪುರದಲ್ಲಿ ಕಾನೂನು ಶಿಕ್ಷಣ ಪಡೆದಿದ್ದ (1951-53) ಅವರು ಪುಣೆವಿಶ್ವ ವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದರು.
ಮಣಿಪಾಲ್ ಮೀಡಿಯ ನೆಟ್‌ವರ್ಕ್ ಅಧೀನದಲ್ಲಿ ಮಣಿಪಾಲ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ದಾವಣಗೆರೆ, ಮುಂಬಯಿಯಿಂದ ಮುದ್ರಣಗೊಳ್ಳುವ ಉದಯವಾಣಿ, ತರಂಗ ವಾರಪತ್ರಿಕೆ, ರೂಪತಾರ ಚಲನಚಿತ್ರ ಮಾಸ ಪತ್ರಿಕೆ, ತುಷಾರ ಮಾಸಿಕ ಡೈಜೆಸ್ಟ್‌ ಮುದ್ರಣಗೊಂಡು ಓದುಗರನ್ನು ಸೆಳೆಯುತ್ತಿದೆ. ಎಂಜಿಎಂ ಕಾಲೇಜು ಟ್ರಸ್ಟ್‌ ಅಧ್ಯಕ್ಷರಾಗಿ ಇದೇ ವೇಳೆ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಸಂಶೋಧನ ಕೇಂದ್ರ, ಎಂಜಿಎಂ ಯಕ್ಷಗಾನ ಕೇಂದ್ರದ ಅಧ್ಯಕ್ಷರಾಗಿಯೂ ಈ ಸಂಸ್ಥೆಗಳ ಅಭಿವೃದ್ಧಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾಗಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಕರ್ನಾಟಕ ಪತ್ರಿಕಾ ಅಕಾಡೆಮಿಯು ಪತ್ರಿಕಾ ರಂಗದ ಕ್ಷೇತ್ರಕ್ಕಾಗಿ ಸಲ್ಲಿಸಿದ ಕೊಡುಗೆಗಾಗಿ ಮಣಿಪಾಲ್ ಪ್ರಿಂಟರ್ಸ್ ಆಂಡ್ ಪಬ್ಲಿಷರ್ಸ್‌ ಲಿ.ಗೆ ಕೊಡಮಾಡಿದ ಪ್ರಶಸ್ತಿಯನ್ನು ಮೋಹನದಾಸ್ ಪೈಯವರು ಸ್ವೀಕರಿಸಿದ್ದರು. ಅವರು ಇಂಡಿಯನ್ ನ್ಯೂಸ್‌ಪೇಪರ್ ಸೊಸೈಟಿಯ (ಐಎನ್‌ಎಸ್) ಕಾರ್ಯನಿರ್ವಾಹಕ ಸಮಿತಿಯ ಸದಸ್ಯರಾಗಿ ಎರಡು ಅವಧಿ ಸೇವೆ ಸಲ್ಲಿಸಿದ್ದರು. ಪತ್ರಿಕೋದ್ಯಮದ ಮೂಲಕ ವಿಶೇಷವಾಗಿ ಕರಾವಳಿ ಕರ್ನಾಟಕದ ಅಭಿವೃದ್ಧಿಯಲ್ಲಿ ಅವರು ದೂರದೃಷ್ಟಿ ಹೊಂದಿದ್ದರು.

 

.

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement