ಪಂಜಾಬ್ ಗುಪ್ತಚರ ವಿಭಾಗದ ಪ್ರಧಾನ ಕಚೇರಿ ಮೇಲೆ ರಾಕೆಟ್ ದಾಳಿ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್: ಮೂಲಗಳು

ಚಂಡೀಗಡ: ಮೇ ತಿಂಗಳಲ್ಲಿ ಪಂಜಾಬ್ ಪೊಲೀಸ್ ಕಟ್ಟಡದ ಮೇಲೆ ನಡೆದ ಭಯೋತ್ಪಾದಕ ದಾಳಿಯ ತನಿಖೆಯ ಸಂದರ್ಭದಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆ ಸಂಪರ್ಕ ಹೊಂದಿರುವ ಇಬ್ಬರನ್ನು ಪೊಲೀಸರು ಗುರುತಿಸಿದ್ದಾರೆ. ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಪೊಲೀಸರು ದಾಳಿಕೋರರ ಪತ್ತೆಗೆ ಮೊರೆ … Continued

ಎಸ್​ಡಿಪಿಐ, ಪಿಎಫ್​ಐ ನಿಷೇಧಕ್ಕೆ ಒತ್ತಾಯಿಸಿ ಗೃಹ ಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಮುತ್ತಿಗೆ; ಲಘು ಲಾಠಿ ಪ್ರಹಾರ

ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಇಂದು ಶುಕ್ರವಾರ ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದರು. ಜಯಮಹಲ್​ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ … Continued

ಸಿಇಟಿ ಫಲಿತಾಂಶ ಪ್ರಕಟ: ವಿವಿಧ ಕೋರ್ಸ್‌ಗಳ ಟಾಪರ್ಸ್​ ಪಟ್ಟಿ ಇಲ್ಲಿದೆ

ಬೆಂಗಳೂರು : ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಕಳೆದ ತಿಂಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟಾರೆ ಯುವತಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದ ಸಿಇಟಿ ಕೇಂದ್ರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಇಂಜಿನಿಯರಿಂಗ್, ಪಶುಸಂಗೋಪನೆ, ಕೃಷಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್​ 2ರ ವರೆಗೆ ವ್ಯಾಪಕ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ಕರ್ನಾಟಕದಲ್ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.ಇಂದಿನಿಂದ ನಾಲ್ಕು ದಿನ ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ (Orange Alert) ನೀಡಲಾಗಿದೆ. ಇಂದಿನಿಂದ ಆಗಸ್ಟ್​ 2ರ ವರೆಗೆ ಉತ್ತರ ಕನ್ನಡ, ದಕ್ಷಿಣ … Continued

ಆಗಸ್ಟ್‌ 31ರ ವರೆಗೆ ಆಗುಂಬೆ ಘಾಟ್‌ನಲ್ಲಿ ಬಸ್, ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ

ಉಡುಪಿ: ಆಗುಂಬೆ ಘಾಟ್‌ ಮೂಲಕ ಲಘು ವಾಹನ ಹಾಗೂ ಬಸ್ಸುಗಳ ಸಂಚಾರಕ್ಕೆ ಮಾತ್ರ ಅನುಮತಿ ಇದ್ದು, ಇದನ್ನು ಆಗಸ್ಟ್ 31ರವರೆಗೆ ಮುಂದುವರೆಸಲಾಗಿದೆ. ಅಲ್ಲಿಯ ತನಕ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂ ಕುಸಿತವಾಗಿರುವ ಹಿನ್ನೆಲೆಯಲ್ಲಿ … Continued

ಕೇರಳದ ನಟ ಶರತ್ ಚಂದ್ರನ್ ಶವವಾಗಿ ಪತ್ತೆ : ವರದಿ

ತಿರುವನಂತಪುರಂ: ಕೇರಳದ ಯುವ ನಟ ಶರತ್ ಚಂದ್ರನ್ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ. 37 ವರ್ಷ ವಯಸ್ಸಿನ ನಟ ಅವರು ತಮ್ಮ “ಅಂಗಮಾಲಿ ಡೈರೀಸ್” ಚಲನಚಿತ್ರದೊಂದಿಗೆ ಪ್ರಾಮುಖ್ಯತೆಯನ್ನು ಪಡೆದರು ಮತ್ತು ಅವರ ಇತರ ಜನಪ್ರಿಯ ಚಲನಚಿತ್ರಗಳು “ಕೂಡೆ”, “ಒರು ಮೆಕ್ಸಿಕನ್ ಅಪರಾತ” ಸೇರಿದಂತೆ ಕೆಲವನ್ನು ಹೆಸರಿಸಬಹುದು. ನಟ ಅಂತೋನಿ ವರ್ಗೀಸ್ ಅವರು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ ಎಂದ ನ್ಯಾಯಾಲಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್, ಅವರ ಪತ್ನಿ ಮತ್ತು ಇತರ ಎಂಟು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಪರಿಗಣಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ   ಎಂದು ನ್ಯಾಯಾಲಯ ಹೇಳಿದೆ. … Continued

ಮಾಹಿತಿ ನೀಡಲು ವಿಳಂಬ ಮಾಡಿದ ಬಿಇಒ ಕಚೇರಿ ಪಿಆರ್‌ಒಗೆ ₹35 ಸಾವಿರ ದಂಡ ವಿಧಿಸಿದ ಹೈಕೋರ್ಟ್‌

ಬೆಂಗಳೂರು: ಬೆಂಗಳೂರಿನ ಕೆ ಆರ್ ಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ಹಕ್ಕು ಕಾಯಿದೆ(ಆರ್‌ಟಿಐ)ಯಡಿ ಮಾಹಿತಿ ಒದಗಿಸಲು ಎರಡು ವರ್ಷ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಅವರಿಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ₹35 ಸಾವಿರ ದಂಡ ವಿಧಿಸಿ ಆದೇಶಿಸಿದೆ. ವೈಟ್‌ಫೀಲ್ಡ್ ನಿವಾಸಿ ಸಿಜೊ ಸೆಬಾಸ್ಟಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ರಾಜ್ಯದಲ್ಲಿ ಇಂದು ಎರಡು ಸಾವಿರದ ಗಡಿ ದಾಟಿದ ದೈನಂದಿನ ಕೊರೊನಾ ಪ್ರಕರಣ, ನಾಲ್ಕು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇಂದು ಶುಕ್ರವಾರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರದಲ್ಲೇ 1,615 ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿಂದು 2,130 ಹೊಸ ಪ್ರಕರಣಗಳು ದಾಖಲಾಗಿದ್ದು, ನಾಲ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿನ್ನೆ 1,800 ಪ್ರಕರಣಗಳು ದಾಖಲಾಗಿತ್ತು. ರಾಜ್ಯದಲ್ಲಿ 1,395 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ … Continued

ರೈಲ್ವೆ ನಿಲ್ದಾಣದಲ್ಲಿ ವೃದ್ಧನಿಗೆ ಒದ್ದು ಕಾಲು ಹಿಡಿದೆಳೆದು ರೈಲು ಹಳಿ ಬಳಿ ತಲೆಕೆಳಗಾಗಿ ನೇತು ಹಾಕಿದ ಪೊಲೀಸ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ | ಪೊಲೀಸ್ ಪೇದೆ ಅಮಾನತು

ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದಲ್ಲಿ ಪೊಲೀಸ್ ಪೇದೆಯೊಬ್ಬರು ವೃದ್ಧರೊಬ್ಬರ ಮೇಲೆ ಅಮಾನುಷವಾಗಿ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೃದ್ಧನನ್ನು ಥಳಿಸಿ ಎಳೆದೊಯ್ಯುವ ವಿಡಿಯೋ ಬೆಳಕಿಗೆ ಬಂದ ನಂತರ ರೇವಾ ಜಿಲ್ಲೆಯ ಪೋಲೀಸನನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ವೃದ್ಧರು ಕುಡಿದ ಅಮಲಿನಲ್ಲಿ ನಿಲ್ದಾಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು. 30 ಸೆಕೆಂಡ್‌ಗಳ … Continued