ಆಂಧ್ರಪ್ರದೇಶದ ಮಾಜಿ ಸಿಎಂ ಎನ್‌ಟಿಆರ್‌ ಪುತ್ರಿ ಆತ್ಮಹತ್ಯೆ

ಹೈದರಾಬಾದ್:‌ ದಿವಂಗತ ನಟ-ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಎನ್‌.ಟಿ. ರಾಮರಾವ್ ಅವರ ಪುತ್ರಿ ಕೆ. ಉಮಾ ಮಹೇಶ್ವರಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮಾ ಮಹೇಶ್ವರಿ ಅವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

advertisement

ಪ್ರಾಥಮಿಕ ತನಿಖೆಯ ಪ್ರಕಾರ, ಅವರು ಅನಾರೋಗ್ಯದ ಕಾರಣ ಖಿನ್ನತೆಗೆ ಒಳಗಾಗಿದ್ದರು. ಪ್ರಕರಣ ದಾಖಲಿಸಲಾಗಿದೆ ಮತ್ತು ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಜುಬಿಲಿ ಹಿಲ್ಸ್ ಪೊಲೀಸ್ ಅಧಿಕಾರಿ ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ. ರಾಮರಾವ್ ಅವರ ನಾಲ್ಕು ಪುತ್ರಿಯರಲ್ಲಿ ಅವರು ಕಿರಿಯವರಾಗಿದ್ದರು.

ಎನ್‌ಟಿ ರಾಮರಾವ್ ಅವರು 1982 ರಲ್ಲಿ ತೆಲುಗು ಸ್ವಾಭಿಮಾನದ ಘೋಷಣೆಯ ಮೇಲೆ ಟಿಡಿಪಿ ಪಕ್ಷ ಸ್ಥಾಪಿಸಿದರು ಮತ್ತು ಒಂಬತ್ತು ತಿಂಗಳೊಳಗೆ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಆಗಿನ ಅವಿಭಜಿತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ನ ಏಕಪಕ್ಷೀಯ ಆಡಳಿತವನ್ನು ಕೊನೆಗೊಳಿಸಿದರು. ಅವರ ಅಳಿಯ ಚಂದ್ರಬಾಬು ನಾಯ್ಡು ನೇತೃತ್ವದ ಬಂಡಾಯದ ನಂತರ ಅಧಿಕಾರದಿಂದ ಹೊರಹಾಕಲ್ಪಟ್ಟ ಕೆಲವು ತಿಂಗಳ ನಂತರ ಅವರು 1996 ರಲ್ಲಿ ತಮ್ಮ 72ನೇ ವಯಸ್ಸಿನಲ್ಲಿ ನಿಧನರಾದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   1984ರ ಆಪರೇಷನ್ ಮೇಘದೂತದ ವೇಳೆ ಹಿಮಕುಸಿತದಲ್ಲಿ ಹೂತು ಹೋಗಿದ್ದ ಸಿಯಾಚಿನ್ ವೀರನ ಪಾರ್ಥಿವ ಶರೀರ 38 ವರ್ಷಗಳ ನಂತರ ಪತ್ತೆ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement