ಜಬಲ್‌ಪುರ ಆಸ್ಪತ್ರೆಯಲ್ಲಿ ಬೆಂಕಿ ಅನಾಹತ; 10 ಮಂದಿ ಸಾವು

ಜಬಲ್ಪುರ: ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೋಮವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ವರು ರೋಗಿಗಳು ಸೇರಿದಂತೆ ಕನಿಷ್ಠ ಹತ್ತು ಜನರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಗೋಹಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಲ್ ಭಾಟಾದಲ್ಲಿರುವ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಅಗ್ನಿ ಅವಘಡದಲ್ಲಿ ಹತ್ತು ಜನರು ಸಾವಿಗೀಡಾಗಿದ್ದಾರೆ ಮತ್ತು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಜಬಲ್ಪುರ ಜಿಲ್ಲಾಧಿಕಾರಿ ಅಲ್ಲಯ್ಯ ರಾಜಾ ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆಯನ್ನು ದೃಢಪಡಿಸಿದ ಜಬಲ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಬಹುಗುಣ, ತೀವ್ರ ಸುಟ್ಟಗಾಯಗಳಿಂದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. “ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರನ್ನು ಗುರುತಿಸಲಾಗುತ್ತಿದೆ” ಎಂದು ಬಹುಗುಣ ಹೇಳಿದರು.
ವರದಿಗಳ ಪ್ರಕಾರ, ಆಸ್ಪತ್ರೆಯಿಂದ ಸ್ಥಳಾಂತರಿಸಲು ಒಂದೇ ಮಾರ್ಗವಿದ್ದ ಕಾರಣ ಹೆಚ್ಚಿನ ಜನರು ಒಳಗೆ ಸಿಲುಕಿಕೊಂಡರು. ಆರಂಭದಲ್ಲಿ ಅಗ್ನಿಶಾಮಕ ದಳದ ವಾಹನಗಳಿಗೂ ಬೆಂಕಿ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಬಳಿಕ ವಿದ್ಯುತ್ ಇಲಾಖೆ ನೌಕರರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದಾಗ ಒಂದು ಗಂಟೆಯ ಪ್ರಯತ್ನದ ನಂತರ ಬೆಂಕಿ ಹತೋಟಿಗೆ ತರಲಾಯಿತು.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

 ಸಿಎಂ ಸಂತಾಪ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಪಘಾತದಲ್ಲಿ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಚೌಹಾಣ್, “ಈ ದುಃಖದ ಸಮಯದಲ್ಲಿ, ದುಃಖಿತ ಕುಟುಂಬಗಳು ತಮ್ಮನ್ನು ತಾವು ಒಂಟಿಯಾಗಿ ಪರಿಗಣಿಸಬಾರದು. ಇಡೀ ಮಧ್ಯಪ್ರದೇಶ ಮತ್ತು ನಾನು ಅವರೊಂದಿಗೆ ಇದ್ದೇವೆ. ರಾಜ್ಯ ಸರ್ಕಾರವು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ ಐದು ಲಕ್ಷ ರೂ. ನೆರವು ನೀಡುತ್ತದೆ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ನೀಡಲಾಗುತ್ತದೆ, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಬೆಂಕಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. “

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement