ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತದ ಜಾರಿ ಮಾಡಿದ್ದ ನಿಷೇಧಾಜ್ಞೆ ಆಗಸ್ಟ್‌ 6ರ ವರೆಗೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹತ್ಯೆಯ ಬಳಿಕ 144 ಸೆಕ್ಷನ್ ಅಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈಗ ಈ ನಿಷೇಧಾಜ್ಞೆಯನ್ನು ಆಗಸ್ಟ್ 6ರ ವರೆಗೆ ವಿಸ್ತರಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 6ರ ವರೆಗೆ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಜುಲೈ 29ರ ಸಂಜೆ 6 ಗಂಟೆಯಿಂದ ಆಗಸ್ಟ್ 1ರ ಮುಂಜಾನೆ 6 ರವರೆಗೆ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದು, ಈಗ ಆಗಸ್ಟ್ 3ರ ಬೆಳ್ಳಗ್ಗೆ 6 ಗಂಟೆ ವರೆಗೆ ಮುಂದುವರೆಸಲಾಗಿದೆ. ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ವಿಧಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement