ಕೂಚ್ ಬೆಹಾರ್‌ನಲ್ಲಿ ವಿದ್ಯುತ್ ಸ್ಪರ್ಶದಿಂದ 10 ಕನ್ವಾರಿಯಾಗಳ ಸಾವು, 19 ಮಂದಿಗೆ ಗಾಯ

ಕೂಚ್ ಬೆಹಾರ್‌: ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಭಾನುವಾರ ತಡರಾತ್ರಿ ಜಲ್ಪೇಶ್‌ಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಟ್ರಕ್ ವಿದ್ಯುತ್ ಸ್ಪರ್ಶದಿಂದ 10 ಕನ್ವಾರಿಯಾಗಳು ಮೃತಪಟ್ಟಿದ್ದಾರೆ ಮತ್ತು 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, 16 ಜನರನ್ನು ಚಿಕಿತ್ಸೆಗಾಗಿ ಜಲ್ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. “ಅವರನ್ನು ಚಂಗ್ರಬಂಧ ಬಿಪಿಎಚ್‌ಸಿಗೆ ಕರೆತರಲಾಯಿತು. ಹಾಜರಾದ ವೈದ್ಯಾಧಿಕಾರಿ 16 … Continued

ಕಾಮನ್‌ವೆಲ್ತ್ ಗೇಮ್ಸ್‌-2022 : 313 ಕೆಜಿ ಭಾರ ಎತ್ತುವ ಮೂಲಕ ಭಾರತಕ್ಕೆ ಮೂರನೇ ಚಿನ್ನದ ಪದಕ ತಂದುಕೊಟ್ಟ ಅಚಿಂತಾ ಶೆಯುಲಿ

ವೇಟ್‌ಲಿಫ್ಟರ್‌ಗಳು ಇಲ್ಲಿಯವರೆಗೆ 2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಸ್ಟಾರ್ ಪರ್ಫಾರ್ಮರ್‌ಗಳಾಗಿದ್ದಾರೆ. ಮೂರನೇ ದಿನವೂ ಇದು ಮುಂದುವರೆಯಿತು. 20 ವರ್ಷದ ಅಚಿಂತಾ ಶೆಯುಲಿ ಪುರುಷರ 73 ಕೆಜಿಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ ಹಾಗೂ ಒಟ್ಟು 313 ಕೆಜಿ ಭಾರ ಎತ್ತುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್ ದಾಖಲೆಯನ್ನು ಮುರಿದಿದ್ದಾರೆ. ಶೆಯುಲಿ ಅವರು 140 ಕೆಜಿ ಮತ್ತು 143 … Continued

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತದ ಜಾರಿ ಮಾಡಿದ್ದ ನಿಷೇಧಾಜ್ಞೆ ಆಗಸ್ಟ್‌ 6ರ ವರೆಗೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹತ್ಯೆಯ ಬಳಿಕ 144 ಸೆಕ್ಷನ್ ಅಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈಗ ಈ ನಿಷೇಧಾಜ್ಞೆಯನ್ನು ಆಗಸ್ಟ್ 6ರ ವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. … Continued

ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಟ್ಟು ಕಳುಹಿಸಿದ ಎನ್‌ಐಎ ಅಧಿಕಾರಿಗಳು

ಕಾರವಾರ: ಎನ್‌ಐಎ ಅಧಿಕಾರಿಗಳು ಭಟ್ಕಳ ( ಮತ್ತು ತುಮಕೂರಿನಲ್ಲಿ ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಭಟ್ಕಳದ ಅಬ್ದುಲ್ ಮುಖ್ತದೀರ್ (30) ಹಾಗೂ ತುಮಕೂರಿನ ಶಂಕಿತನನ್ನು ಬಿಡುಗಡೆ ಮಾಡಿದ್ದಾರೆ. ಹೆಚ್ಚಿನ ವಿಚಾರಣೆಗೆ ದೆಹಲಿಗೆ ಬರುವಂತೆ ಎನ್‌ಐಎ ನೋಟಿಸ್‌ ನೀಡಿದ್ದಾರೆ. ಅಬ್ದುಲ್ ಮುಖ್ತದೀರ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮುಖ್ಯರಸ್ತೆ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ … Continued