ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಭೇಟಿ ಸಾಧ್ಯತೆ

posted in: ರಾಜ್ಯ | 0

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಅಮಿತ್ ಶಾ ಅವರು ಆಗಸ್ಟ್ 3 ಹಾಗೂ 4ರಂದು ಕರ್ನಾಟಕಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ಇಂದು ಮಂಗಳವಾರ ಸಂಜೆಯೊಳಗೆ ಅಮಿತ್ ಶಾ ಅವರ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ನಂತರ ಅಮಿತ್ ಶಾ ಭೇಟಿ ನೀಡುತ್ತಿರುವುದು ಮಹತ್ವ ಪಡೆದಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಅಮಿತ್‌ ಶಾ ರಾಜ್ಯಕ್ಕೆ ಬರುವುದನ್ನು ರಾಜ್ಯ ನಾಯಕರಿಗೆ ಮಾಹಿತಿ ನೀಡದೇ ಹೈಕಮಾಂಡ್‌ ದಿಢೀರ್‌ ಆಗಿ ನಿಗದಿ ಪಡಿಸಿದೆ ಎನ್ನಲಾಗಿದೆ.ಪಕ್ಷದ ಕಾರ್ಯಕ್ರಮ, ಸರ್ಕಾರಿ ಕಾರ್ಯಕ್ರಮ ನಿಗದಿ ಮಾಡಿಕೊಂಡು ರಾಜ್ಯಕ್ಕೆ ಅಮಿತ್‌ ಶಾ ಆಗಮಿಸಲಿದ್ದಾರೆ ಎಂದು ಮೂಲಗಳು ಹೇಳುತ್ತವೆ.
ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅಮಿತ ಶಾ ಭೇಟಿ ನೀಡುವುದು ಮಹತ್ವ ಪಡೆಯಲಿದೆ.
ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ನಾಗರಹೊಳೆಯಲ್ಲಿ ಸಫಾರಿ ವೇಳೆ ಗಾಯಗೊಂಡ ಮರಿ ಆನೆ ನರಳಾಟ ಕಂಡು ಮರುಗಿದ ರಾಹುಲ್ ಗಾಂಧಿ: ಸಿಎಂ ಬೊಮ್ಮಾಯಿಗೆ ಪತ್ರ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement