ಇದು ಸೀಜ್‌ : ಕಾಂಗ್ರೆಸ್‌ ಕೇಂದ್ರ ಕಚೇರಿ, ಸೋನಿಯಾ-ರಾಹುಲ್‌ ಗಾಂಧಿ ಮನೆ ಹೊರಗೆ ಪೊಲೀಸರ ನಿಯೋಜನೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯಾ ಲಿಮಿಟೆಡ್ ಕಚೇರಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೀಲ್ ಮಾಡಿದ ನಂತರ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಕಾಂಗ್ರೆಸ್‌ ಕೇಂದ್ರ ಕಚೇರಿಗೆ ಪೊಲೀಸ್‌ ಪಡೆ ನಿಯೋಜಿಸಿರುವುದನ್ನು ಕಾಂಗ್ರೆಸ್ ಟೀಕಿಸಿದೆ.
ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ದೆಹಲಿಯ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಚೇರಿ ಬಳಿ ಭದ್ರತೆ ಹೆಚ್ಚಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಟ್ವೀಟ್ ಮಾಡಿದೆ, “ಸತ್ಯದ ಧ್ವನಿಯು ಪೊಲೀಸ್ ಕಾವಲಿಗೆ ಹೆದರುವುದಿಲ್ಲ. ಗಾಂಧಿ ಅನುಯಾಯಿಗಳು ಈ ಕತ್ತಲೆಯ ವಿರುದ್ಧ ಹೋರಾಡಿ ಗೆಲ್ಲುತ್ತಾರೆ. ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಸೀಜ್‌ ಹಾಗೂ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಪೊಲೀಸರ ಮೂಲಕ ನಿರ್ಬಂಧಿಸಲಾಗಿದೆ. ಸರ್ವಾಧಿಕಾರಿತನ ಭಯ ಮತ್ತು ಕೋಪ ಎರಡನ್ನೂ ತೋರಿಸುತ್ತದೆ. ಆದರೆ ಹಣದುಬ್ಬರ ಮತ್ತು ನಿರುದ್ಯೋಗದ ಪ್ರಶ್ನೆಗಳನ್ನು ಇನ್ನೂ ಕೇಳಲಾಗುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ಪಕ್ಷದಕೇಂದ್ರ ಕಚೇರಿಗೆ ಪೊಲೀಸರನ್ನು ನಿಯೋಜಿಸಿರುವುದನ್ನು ಕಟುವಾಗಿ ಟೀಕಿಸಿದ್ದಾರೆ. ಅವರು ಯಾಕೆ ಹಾಗೆ ಮಾಡಿದ್ದಾರೆ ಎಂಬುದು ನಿಗೂಢವಾಗಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಕಾಂಗ್ರೆಸ್-ಪ್ರೇರಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು.

ಇಂದಿನ ಪ್ರಮುಖ ಸುದ್ದಿ :-   ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement