ಜಾಮೀನಿನ ಮೇಲೆ ಹೊರಬಂದ ವ್ಯಕ್ತಿಯಿಂದ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ, ವೀಡಿಯೊ ಮಾಡಿದ ಸ್ನೇಹಿತ: ಪೊಲೀಸರು

ಜಬಲ್ಪುರ್: 2020 ರ ಅತ್ಯಾಚಾರ ಪ್ರಕರಣದಲ್ಲಿ ಬಂಧನದ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿ, ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಅದೇ ಯುವತಿಗೆ ಚಾಕು ತೋರಿಸಿ ಮತ್ತೆ ಅತ್ಯಾಚಾರವೆಸಗಿದ್ದಾನೆ. ಈ ಹಿಂದೆ ತನ್ನ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮತ್ತು ಆತನ ಸ್ನೇಹಿತನನ್ನು ಒಳಗೊಂಡ ಘಟನೆ ಸುಮಾರು ಒಂದು ತಿಂಗಳ ಹಿಂದೆ ನಡೆದಿದೆ ಎಂದು ಮಹಿಳೆ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಗ 19 ವರ್ಷ ವಯಸ್ಸಿನ ಯುವತಿ, ಎರಡು ವರ್ಷಗಳ ಹಿಂದೆ ಅಪ್ರಾಪ್ತಳಾಗಿದ್ದಾಗ ಅದೇ ಆರೋಪಿಗಳು ಅತ್ಯಾಚಾರವೆಸಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

advertisement

ದೂರುದಾರರ ಪ್ರಕಾರ, ಆರೋಪಿ ವಿವೇಕ್ ಪಟೇಲ್ ಅವಳ ಮೇಲೆ ಅತ್ಯಾಚಾರ ಎಸಗಿದ್ದು, ತನ್ನ ಸ್ನೇಹಿತನೊಂದಿಗೆ ಅದೇ ಅಪರಾಧವನ್ನು ಎಸಗಿದ್ದಾನೆ” ಎಂದು ಪೊಲೀಸ್ ಠಾಣೆಯ ಉಸ್ತುವಾರಿ ಆಸಿಫ್ ಇಕ್ಬಾಲ್ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು 2020ರಲ್ಲಿ ಬಂಧಿಸಲಾಗಿತ್ತು. ಆದಾಗ್ಯೂ, ಆತ ಸುಮಾರು ಒಂದು ವರ್ಷದ ನಂತರ 2021 ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಅವರು ಹೇಳಿದರು.
ಆರೋಪಿಯು ಒಂದು ತಿಂಗಳ ಹಿಂದೆ ತನ್ನ ಸ್ನೇಹಿತನೊಂದಿಗೆ ತನ್ನ ಮನೆಗೆ ಬಲವಂತವಾಗಿ ನುಗ್ಗಿ ತನಗೆ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯದ ವಿಡಿಯೋ ಮಾಡಿ, ಆಕೆ ಸಲ್ಲಿಸಿದ್ದ ಹಿಂದಿನ ದೂರನ್ನು ಹಿಂಪಡೆಯದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಕ್ಲಿಪ್ ಅನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ದೂರಿನಲ್ಲಿ ತಿಳಿಸಲಾಗಿದೆ ಎಂದು ಇಕ್ಬಾಲ್ ಹೇಳಿದ್ದಾರೆ.
ಸೋಮವಾರ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಭಾರೀ ಮಳೆ ಮಳೆಯ ಮಧ್ಯೆ ನೀರು ತುಂಬಿದ ಕಾಲೋನಿಯ ಬೀದಿಯೊಳಗೆ ರಾಜಾರೋಷವಾಗಿ ಹೋಗುತ್ತಿರುವ ಎಂಟು ಅಡಿ ಉದ್ದದ ಮೊಸಳೆ | ವೀಕ್ಷಿಸಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement