ವಿಧಾನಸಭೆ ಚುನಾವಣೆ ಬಳಿಕವೇ ಮುಂದಿನ ಸಿಎಂ ಹೆಸರು ಘೋಷಣೆ, ಈಗ ಅಪ್ರಸ್ತುತ: ಹುಬ್ಬಳ್ಳಿ ಕಾಂಗ್ರೆಸ್‌ ಸಭೆಯಲ್ಲಿ ರಾಹುಲ್‌ ಗಾಂಧಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ  ನಡೆಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷ‌ ಸಂಘಟನೆ, ಚುನಾವಣೆ ರಣತಂತ್ರದ ಬಗ್ಗೆ ಮಾತನಾಡಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾಯಕರಿಗೆ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸಲಹೆ ನೀಡಿದರು. ಆಡಳಿತಾರೂಢ ಸರ್ಕಾರದ ವೈಫಲ್ಯ ಎತ್ತಿಹಿಡಿದು ಜನರ ಮುಂದಿಟ್ಟು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ಎಂದು ರಾಜ್ಯ ನಾಯಕರಿಗೆ ಸಲಹೆ ನೀಡಿದರು.
ಚುನಾವಣೆಗೆ ಮೊದಲು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಒಗ್ಗೂಡಿ ಕೆಲಸ ಮಾಡಿ. ಪಕ್ಷವನ್ನು ಅಧಿಕಾರಕ್ಕೆ ತರಲು ಗಮನಕೊಡಿ ಎಂದು ಕಿವಿಮಾತು ಹೇಳಿದರು. ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರದ ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲರೂ ಸಣ್ಣತನ ಬಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅನಗತ್ಯವಾಗಿ ಪರಸ್ಪರ ಕಚ್ಚಾಟ ಬೇಡ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ನಾಯಕರ ಪಡೆ ಇದೆ. ಮುಂದಿನ ಮುಖ್ಯಮಂತ್ರಿ ಘೋಷಣೆ ಈಗ ಅಪ್ರಸ್ತುತ. ಚುನಾವಣೆ ಫಲಿತಾಂಶದ ಬಳಿಕವಷ್ಟೇ ಈ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ನನ್ನ ಹೆಸರು ಸಾವರ್ಕರ್ ಅಲ್ಲ...ನಾನು ಗಾಂಧಿ, ಕ್ಷಮೆ ಕೇಳೋಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

ಸಭೆ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ನಾಯಕತ್ವದ ಕಿತ್ತಾಟ ಬದಿಗೊತ್ತಿ ಸಂಘಟಿತ ಹೋರಾಟಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾರೂ ಸಹ ನಾಯಕತ್ವದ ಬಗ್ಗೆ ಮಾತನಾಡುವಂತಿಲ್ಲ. ಸುಮ್ಮನೆ ಕೆಲಸ ಮಾಡಬೇಕು. ಎಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸಬೇಕು. ಸರ್ಕಾರದ ವೈಫಲ್ಯಗಳನ್ನು ಬಗ್ಗೆ ಮಾತನಾಡಬೇಕು. ನಾಯಕತ್ವದ ಬಗ್ಗೆ ಮಾತನಾಡಿದರೆ ಅವರ ಮೇಲೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಕೆಲ ನಾಯಕರು ಈ ಬಗ್ಗೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಹಾಗೆ ಆಗದಂತೆ ನಾಯಕರು ಎಚ್ಚರ ವಹಿಸಿಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಜನರು ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ. ಹೀಗಾಗಿ ಮುಂದಿನ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತರಲು ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಬಹುಮತ ಪಡೆಯುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವುದಾಗಿ ತಿಳಿಸಿರುವ ವೇಣುಗೋಪಾಲ್, ಸಭೆಯಲ್ಲಿ ಪಕ್ಷದ ಸಂಘಟನೆ ಇತ್ಯಾದಿಗಳ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಟಿಕೆಟ್ ಈಗಲೇ ಫೈನಲ್ ಮಾಡಲ್ಲ. ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಅಂತ ಮುಂದೆ ತೀರ್ಮಾನ ಮಾಡಲಾಗಿತ್ತು. ಸದ್ಯಕ್ಕೆ ಏನಿದ್ದರೂ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮೊದಲಾದವರು ಭಾಗಿಯಾಗಿದ್ದರು.

ಇಂದಿನ ಪ್ರಮುಖ ಸುದ್ದಿ :-   ಭಾರತದ ಧ್ವನಿಗಾಗಿ ಹೋರಾಡ್ತೇನೆ, ಅದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹಗೊಂಡ ನಂತರ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement