ಚಿತ್ರದುರ್ಗ: ಮುರುಘಾ ಮಠದಲ್ಲಿ ಲಿಂಗ ದೀಕ್ಷೆ ಪಡೆದ ರಾಹುಲ್‌ ಗಾಂಧಿ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು, ಬುಧವಾರ ಲಿಂಗ ದೀಕ್ಷೆ ಪಡೆದರು.
ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದ ವೇಳೆ ಅವರು ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ರಾಹುಲ್‌ ಗಾಂಧಿ ಅವರಿಗೆ ಲಿಂಗದೀಕ್ಷೆ ನೀಡಿದ್ದಾರೆ.
ಶ್ರೀಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರಿಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಕೆಲಕಾಲ ಧ್ಯಾನ ಮಾಡಿದರು.

ಮುರುಘಾಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ಮೊದಲಿಗೆ ಬಸವಣ್ಣನ ಭಾವಚಿತ್ರ ಹಾರ ಹಾಕಿ ನಮಸ್ಕರಿಸಿದರು. ನಂತರ ಮಠಾಧೀಶರೊಂದಿಗೆ ಕೆಲಕಾಲ ಸಂವಾದ ನಡೆಸಿದ ರಾಹುಲ್ ಗಾಂಧಿ ಅವರಿಗೆ ಲಿಂಗಧಾರಣೆ ಮಾಡಿ, ವಿಭೂತಿ ಹಚ್ಚಿ, ಲಿಂಗ ಪೂಜೆ ತತ್ವದ ಉಪದೇಶ ಮಾಡಿದರು ಮತ್ತು ಲಿಂಗ ಪೂಜೆ ಪಾಲಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.
ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಗಾಂಧಿ ಅವರ ಜೊತೆಗಿನ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ, ವೇಣುಗೋಪಾಲ, ಕೆಪಿಪಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಇದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement