ದಾವಣಗೆರೆ: ಸಿದ್ದರಾಮೋತ್ಸವದ ವೇಳೆ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಆಲಿಂಗನದ ಮೂಲಕ ಒಗ್ಗಟ್ಟು ಪ್ರದರ್ಶಿಸಿದ ಡಿಕೆ ಶಿವಕುಮಾರ-ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಸಮಾರಂಭದಲ್ಲಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಲಂಗಿಸಿಕೊಂಡರು. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ನಡುವಿನ ಜಟಾಪಟಿ ವರದಿಗಳ ಮಧ್ಯೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಗ್ಗಟ್ಟಿನ ಸಂದೇಶ ರವಾನಿಸಲು ಯತ್ನಿಸಿದ್ದಾರೆ.
ಶಿವಕುಮಾರ್ ಮತ್ತು ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡುವಿನ ಒಗ್ಗಟ್ಟು ಮತ್ತು ಬಾಂಧವ್ಯದ ಸಾರ್ವಜನಿಕ ಪ್ರದರ್ಶನದಲ್ಲಿ, ದಾವಣಗೆರೆಯಲ್ಲಿ ಇಬ್ಬರು ನಾಯಕರು ಪರಸ್ಪರ ಆಲಂಗಿಸಿಕೊಂಡು ತಮ್ಮ ಏಕತೆ ಪ್ರದರ್ಶಿಸುವ ಯತ್ನ ಮಾಡಿದ್ದಾರೆ. ದಾವಣಗೆರೆಯಲ್ಲಿ ಲಕ್ಷಾಂತರ ಜನ ಸೇರಿದ್ದ ‘ಸಿದ್ದರಾಮೋತ್ಸವ’ ಕಾರ್ಯಕ್ರಮದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರೂ ಇದನ್ನು ಶ್ಲಾಘಿಸಿದರು.
ವೇದಿಕೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಿವಕುಮಾರ್ ಸನ್ಮಾನಿಸಿದಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಲಂಗಿಸಿಕೊಳ್ಳುವಂತೆ ರಾಹುಲ್ ಗಾಂಧಿ ಸೂಚಿಸಿದರು. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಆ ಕ್ಷಣ ಸಿದ್ದರಾಮಯ್ಯ ಅವರನ್ನು ಆಲಂಗಿಸಿದರು. ಶಿವಕುಮಾರ್ ಕೂಡ ಸಿದ್ದರಾಮಯ್ಯ ಅವರ ಕೈಯನ್ನು ಮೇಲಕ್ಕೆತ್ತಿ ಪಕ್ಷದೊಳಗೆ ಒಗ್ಗಟ್ಟು ಪ್ರದರ್ಶಿಸಲು ಜನರತ್ತ ಮುಖ ಮಾಡಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬೃಹತ್ ಜನಸಮೂಹವನ್ನುದ್ದೇಶಿಸಿ ಮಾತನಾಡುವಾಗ ಇಬ್ಬರು ನಾಯಕರು ಆಲಂಗಿಸಿಕೊಳ್ಳುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದು ಹೇಳಿದರು. ಇಂದು ವೇದಿಕೆಯಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪರಸ್ಪರ ಆಲಂಗಿಸಿಕೊಂಡಿರುವುದನ್ನು ನೋಡಿ ಖುಷಿಯಾಯಿತು ಎಂದ ರಾಹುಲ್, ಶಿವಕುಮಾರ್ ಕಾಂಗ್ರೆಸ್ ಸಂಘಟನೆಗೆ ಅಪಾರವಾದ ಕೆಲಸ ಮಾಡಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಅನ್ನು ಸೋಲಿಸಲು ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಒಗ್ಗೂಡಿದೆ ಎಂದು ಹೇಳಿದರು.
ಮಂಗಳವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಹುಲ್ ಗಾಂಧಿ, 2023ರ ವಿಧಾನಸಭಾ ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಪಕ್ಷದ ಕರ್ನಾಟಕ ಘಟಕದ ನಾಯಕರಿಗೆ ಸೂಚಿಸಿದರು ಮತ್ತು ನಾಯಕತ್ವ ಮತ್ತು ಆಂತರಿಕ ವಿಷಯಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಬೇಡಿ ಎಂದು ಕಟ್ಟಪ್ಪಣೆ ಮಾಡಿದರು.

ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿ ನಾಯಕರು ಎಂದು ಪರಿಗಣಿಸಲಾಗಿದೆ.
ಚುನಾವಣೆಯಲ್ಲಿ ಬಹುಮತ ಗಳಿಸುವ ಪಕ್ಷದ ನೂತನ ಶಾಸಕರು ಮತ್ತು ಹೈಕಮಾಂಡ್ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತದೆ ಎಂದು ರಾಹುಲ್‌ ಗಾಂಧಿ ಹುಬ್ಬಳ್ಳಿಯಲ್ಲಿ ಪಕ್ಷದ ಸಭೆಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಸಾರ್ವಜನಿಕವಾಗಿ ಈ ರೀತಿ ಮಾಡಿದರೂ ಅವರ ನಿಷ್ಠಾವಂತರು ಮತ್ತು ಬೆಂಬಲಿಗರು ತಮ್ಮ ನಾಯಕನನ್ನು ಬಿಂಬಿಸುತ್ತಿರುವುದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ತಮ್ಮ ಜನ್ಮದಿನಾಚರಣೆಯ ಸಂಭ್ರಮಾಚರಣೆಯ ಮೆಗಾ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮತ್ತು ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಮಾತು ವಿರೋಧ ಪಕ್ಷಗಳ ಭ್ರಮೆ ಮತ್ತು ಸೃಷ್ಟಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಶಿವಕುಮಾರ್ ಮತ್ತು ನಾನು ಒಟ್ಟಿಗೆ ಇದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಅವರು ಹೇಳಿದರು.
ಶಿವಕುಮಾರ್ ಮಾತನಾಡಿ, ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement