ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ ವರೆಗೆ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಪ್ರಾಣ ಹಾನಿ, ಆಸ್ತಿಹಾನಿ ಸಾಕಷ್ಟು ಪ್ರಮಾಣದಲ್ಲಿ ಆಗಿದೆ. 608 ಮನೆ, 299 ರಸ್ತೆ, 4,224 ಶಾಲೆಗಳಿಗೆ ಹಾನಿಯಾಗಿದೆ. 64 ಮಂದಿ ಮೃತಪಟ್ಟಿಪ್ಪದ್ದು, 14,956 ಮಂದಿ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

advertisement

ಅಲ್ಲದೆ, 2,450 ಮನೆಗಳು ಭಾಗಶಃ ಹಾನಿಗೊಂಡಿವೆ. ನೆರೆಯಲ್ಲಿ ಸಿಲುಕಿದ್ದ 8,057 ಮಂದಿಯನ್ನು ರಕ್ಷಿಸಲಾಗಿದ್ದು, 6933 ಮಂದಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ ಎಂದರು.
ಮಳೆಯಿಂದ 1,8,280 ಹೆಕ್ಟೇರ್ ಬೆಳೆ ನಾಶವಾದರೆ, 4,500 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. 61 ಕೆರೆಗಳು, 299 ಸೇತುವೆಗಳು ಹಾನಿಗೊಳಗಾಗಿವೆ ಎಂದು ಎಂದು ಮಾಹಿತಿ ನೀಡಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಇಂದೋರ್‌ನಲ್ಲಿ 5000 ಜನರೊಂದಿಗೆ ಭಾರತದ ನಕ್ಷೆ ರಚಿಸುವ ಮೂಲಕ ವಿಶ್ವ ದಾಖಲೆ ನಿರ್ಮಾಣ | ವೀಕ್ಷಿಸಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement