ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ತಯಾರಿ ಆರಂಭಿಸಿವೆ. ಈಗ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ನಟ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಮಾತನಾಡಿದ ಟೆನ್ನಿಸ್ ಕೃಷ್ಣ, ನಾನು ಅಧಿಕಾರಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಎಎಪಿಯಲ್ಲಿ ಭ್ರಷ್ಟಾಚಾರ ಇಲ್ಲ. ಹೀಗಾಗಿ ಜನರ ಸೇವೆ ಮಾಡಲು ನಾನು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಸರ್ಕಾರಿ ಕಾಲೇಜುಗಳನ್ನು ಮುಚ್ಚುತ್ತಿರುವುದರ ವಿರುದ್ಧ ಹೋರಾಟ ಮಾಡುತ್ತೇನೆ. ಕೋಲಾರದಲ್ಲಿ ನೀರಿನ ಸಮಸ್ಯೆ ಬಗ್ಗೆ ಹೋರಾಟ ಮಾಡುವೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ, ಕನ್ನಡ ಉಳಿಯಬೇಕು ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement