ದಕ್ಷಿಣ ಕನ್ನಡದಲ್ಲಿ ನಾಳೆಯಿಂದ ಹೊಸ ನಿಯಮ: ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಯುವಕರ ಹತ್ಯೆ ಪ್ರಕರಣದ ನಂತರ ಈಗ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ  ಶುಕ್ರವಾರದಿಂದ  ದ್ವಿಚಕ್ರ ವಾಹನದಲ್ಲಿ ಇಬ್ಬರು ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.
ಮಂಗಳೂರಿನ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ನಗರ ಕಮಿಷನರ್‌ ವ್ಯಾಪ್ತಿಯ ಪೊಲೀಸ್‌ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವಿಚಕ್ರ ವಾಹನದಲ್ಲಿ 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಓಡಾಡಬಹುದು. ಇಬ್ಬರು ಪುರುಷರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಗೊಳಿಸಲಾಗಿದ್ದು, ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಹೇಳಿದ್ದಾರೆ. ಎಂದು ಹೇಳಿದ್ದಾರೆ.

ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ಮಾಡಿದ್ದರು. ಆಗ ಎಲ್ಲ ಪುರಷ ಹಿಂಬದಿ ಸವಾರರಿಗೆ ತಡೆ ಮಾಡಿದ್ದರು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದರು.
2015ರ ಬಳಿಕದ ಕೋಮುಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ಆರೋಪಿಗಳ ಬಗ್ಗೆ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಪೊಲೀಸ್‌ ವತಿಯಿಂದ ಗಡಿಪ್ರದೇಶಗಳಲ್ಲಿ 12 ಕಡೆ ಹಾಗೂ ನಗರ ಪೊಲೀಸ್‌ ವ್ಯಾಪ್ತಿ ಯಲ್ಲಿ 6 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಹಾಕಲಾಗಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಹಾಗೂ ಅಹಿತಕರ ಘಟನೆಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮುಂದಿನ ಒಂದು ವರ್ಷ ಕಾಲ ಚೆಕ್‌ಪೋಸ್ಟ್‌ಗಳು ಕಾರ್ಯವಹಿಸಲಿವೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement