ವಿಧಾನ ಪರಿಷತ್‌ ಉಪಚುನಾವಣೆ : ಬಾಬುರಾವ್ ಚಿಂಚನಸೂರ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗುವ ಒಂದು ಸ್ಥಾನದ ಉಪಚುನಾವಣೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ ನಡೆಸಿತ್ತು. ಆಡಳಿತಾರೂಢ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ ಮಾತ್ರ ಚುನಾವಣಾ ಕಣದಲ್ಲಿ ಇದ್ದಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ಜುಲೈ 25 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಆ.1ರಂದು ಬಾಬುರಾವ್ ಚಿಂಚನಸೂರ್ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ನಾಮಪತ್ರ ವಾಪಸ್ ಪಡೆಯಲು ಇಂದು, ಗುರುವಾರ ಕಡೆ ದಿನವಾಗಿತ್ತು. ನಾಮಪತ್ರ ವಾಪಸ್ ಪಡೆಯುವ ಗಡುವು ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣಾಕಾರಿ ಚಿಂಚನಸೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement