ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಮಣಿದ ಜಿಲ್ಲಾಡಳಿತ: ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ನಿರ್ಬಂಧದ ಆದೇಶ ರದ್ದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿಯ ಪುರುಷ ಸವಾರರಿಗೆ ನಿರ್ಬಂಧ ವಿಧಿಸಿ ಜಾರಿಗೆ ಮುಂದಾಗಿದ್ದ ಗುರುವಾರ ಬೆಳಿಗ್ಗೆಯ ಆದೇಶವನ್ನು ಸಂಜೆ ಜಿಲ್ಲಾಡಳಿತ ಹಿಂತೆಗೆದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯ ವೇಳೆಯಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬೈಕ್ ಹಿಂಬದಿಯ ಸಾವರರಿಗೆ ಪ್ರಯಾಣ ನಿರ್ಬಂಧ ವಿಧಿಸಿ ಆದೇಶಿಸಲಾಗಿತ್ತು. ಈ ಆದೇಶಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ನಂತರ ಸಾರ್ವಜನಿಕರ ಒತ್ತಡಕ್ಕೆ ಮಣಿದು, ಈ ಆದೇಶವನ್ನು ಹಿಂಪಡೆದಿದೆ.

ನಗರದಲ್ಲಿ ಇಂದು, ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದರು. ಆ ಬಳಿಕ ಸಾರ್ವಜನಿಕ ವಲಯದಲ್ಲಿ ಈ ನಿಯಮದ ವಿರುದ್ಧ ತೀವ್ರ ಆಕ್ರೋಶ ಕೇಳಿ ಬಂದಿತ್ತು. ಹೀಗಾಗಿ ಜಿಲ್ಲಾಡಳಿತ ಆದೇಶ ರದ್ದು ಮಾಡಿದೆ.
ಅಲ್ಲದೆ, ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಅವಧಿ ಕೊಂಚ ಸಡಿಲ ಮಾಡಿ ಜಿಲ್ಲಾಡಳಿತ ಅದೇಶಿಸಿದೆ. ಸಂಜೆ 6 ಬದಲು ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆಯಾಗಲಿದೆ. ಮಂಗಳೂರಿನಲ್ಲಿ ಸರಣಿ ಹತ್ಯೆಯ ಬಳಿಕ ಈ ನಿಯಮ ಜಾರಿಗೆ ಬಂದಿತ್ತು.
.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement