ಕಾರಿನ ಮೇಲೆ ಉರುಳಿ ಬಿದ್ದ ಮರ: ತಂದೆ-ಮಗ ಸ್ಥಳದಲ್ಲೇ ಸಾವು

posted in: ರಾಜ್ಯ | 0

ಚಾಮರಾಜನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಘಟನೆ ನಡೆದಿದೆ.
ಕುದೇರು ರಸ್ತೆಯಲ್ಲಿ ಚಲಿಸುತ್ತಿದ್ದ ಮಾರುತಿ ಒಮ್ನಿ ಕಾರಿನ ಮೇಲೆ ಹಳೆಯ ಮರ ಉರುಳಿ ಬಿದ್ದಿದೆ. ಮೃತರನ್ನು ಹೊನ್ನೂರಿನ ಹೆಚ್.ಬಿ. ರಾಜು(49) ಮತ್ತು ಅವರ ಪುತ್ರ ಶರತ್(22) ಎಂದು ಗುರುತಿಸಲಾಗಿದೆ. ರಾಜು ಯಳಂದೂರಿನಲ್ಲಿ ಹೋಲ್​ಸೇಲ್​ ಅಂಗಡಿ ನಡೆಸುತ್ತಿದ್ದರು.

advertisement

ಶುಕ್ರವಾರ ಸಂಜೆ ೬ರ ಸುಮಾರಿಗೆ ಸಂತೇಮರಹಳ್ಳಿಯಿಂದ ಕುದೇರಿಯತ್ತ ಅವರು ಹೊರಟಿದ್ದರು ಎಂದು ಹೇಳಲಾಗಿದೆ. ಕಳೆದೆರಡು ದಿನದಿಂದ ಒಂದೇ ಸಮನೆ ಮಳೆಯಾಗುತ್ತಿದ್ದು ಮರ ನೀರಿಗೆ ನೆನೆದಿದ್ದರಿಂದ ಅದು ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ನುಜ್ಜು-ಗುಜ್ಜಾಗಿದ್ದು ಅದರಡಿ ಸಿಲು ಮೃತಪಟ್ಟಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಹೊರಗುತ್ತಿಗೆ ನೇಮಕಾತಿ: ಶೇ.33ರಷ್ಟು ಹುದ್ದೆ ಮಹಿಳೆಯರಿಗೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ನಿಮ್ಮ ಕಾಮೆಂಟ್ ಬರೆಯಿರಿ

advertisement