ತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ 8 ನೇ ತರಗತಿ ಬಾಲಕಿ

ವೆಲ್ಲೂರ್‌ : ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ 44 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಕಳೆದ ಹತ್ತು ತಿಂಗಳಿನಿಂದ ಪದೇ ಪದೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಧರಿಸುವಂತೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆಕೆಯ ಸಂಬಂಧಿಕರು ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಾಗ, ರೋಗನಿರ್ಣಯ ಮಾಡಿದ ವೈದ್ಯರು ಆಕೆ ಗರ್ಭಿಣಿ ಎಂದು ಎಂಬುದನ್ನು ತಿಳಿಸಿದ್ದಾರೆ.

advertisement

ಮಂಗಳವಾರ, ಆಗಸ್ಟ್ 2 ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆಯ ಬಗ್ಗೆ ವೈದ್ಯಕೀಯ ತಂಡವು ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದು, ಅವರು ವೆಲ್ಲೂರ್ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸ್ ತಂಡವು ಅಪ್ರಾಪ್ತ ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ಕಳೆದ 10 ತಿಂಗಳಿನಿಂದ ಆಕೆಯ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದು ಪತ್ತೆಯಾಗಿದೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹುಡುಗಿಯ ಪೋಷಕರು ಬೇರ್ಪಟ್ಟಿದ್ದಾರೆ. ಅವಳು ಮತ್ತು ಅವಳ ಸಹೋದರ ತನ್ನ ಅಜ್ಜಿಯರೊಂದಿಗೆ ವಾಸಿಸುತ್ತಿದ್ದರು.

ಓದಿರಿ :-   ಚುನಾವಣೆ ಸಂದರ್ಭದಲ್ಲಿ ನೀಡುವ ಉಚಿತ ಕೊಡುಗೆ ಗಂಭೀರ ಸಮಸ್ಯೆ, ಆರ್ಥಿಕತೆ -ಜನ-ಕಲ್ಯಾಣದ ಮಧ್ಯೆ ಸಮತೋಲನ ಬೇಕು: ಸುಪ್ರೀಂಕೋರ್ಟ್ -

ಹುಡುಗಿ ತನ್ನ ಅಜ್ಜಿ ನೀಡಿದ ಬೇಯಿಸಿದ ಆಹಾರ ನೀಡಲು ಪ್ರತಿದಿನ ತನ್ನ ತಂದೆ ಇದ್ದಲ್ಲಿ ಭೇಟಿ ನೀಡುತ್ತಿದ್ದಳು. ತಂದೆ ಆಹಾರ ತಾನು ನೀಡಲು ಬಂದಾಗಲೆಲ್ಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತನಿಖೆಯ ವೇಳೆ ಬಾಲಕಿ ಬಹಿರಂಗಪಡಿಸಿದ್ದಾಳೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಂದೆ ಬೆದರಿಕೆ ಹಾಕಿದ್ದರು ಎಂದು ಆಕೆ ಹೇಳಿದ್ದಾಳೆ.
ಇದರ ಆಧಾರದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು. ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ವಿಭಾಗಗಳು ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement